ಹುಬ್ಬಳ್ಳಿಯಲ್ಲಿ ಆಶಾಕಾರ್ಯಕರ್ತೆಯರ ಪ್ರತಿಭಟನೆ

ಪ್ರತಿ ತಿಂಗಳ ಗೌರವ ಧನವನ್ನು 12 ಸಾವಿರಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕೊರೊನಾ ಸಂಬಂಧಿದಸಿದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತೆಯರಿಗೆ ಅಗತ್ಯ ರಕ್ಷಣಾ ಸಾಧನೆಗಳನ್ನು ನೀಡಬೇಕು ಎಂದು ಆಗ್ರಹಿಸಿದರು. ಚಪ್ಪಾಳೆ ತಟ್ಡುವ ಮೂಲಕ ಗೌರವ ಸಲ್ಲಿಸುತ್ತಿರುವುದು ಸಂತಸ ತಂದಿದೆ. ಆದರೆ, ಜೀವ ಪಣಕ್ಕಿಟ್ಡು ಕೆಲಸ ಮಾಡುತ್ತಿರುವ ನಮಗೆ ಗೌರವ ಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಈಗಾಗಲೇ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಯಾವುದೇ ಪ್ರತಿಕ್ರಿಯೆ ಕೂಡ ಇಲ್ಲ. ಆದ್ದರಿಂದ ಅನಿವಾರ್ಯವಾಗಿ ಪ್ರತಿಭಟನೆ ಮಾಡಬೇಕಾಗಿದೆ ಎಂದು ದೂರಿದರು.

 

Please follow and like us:

Leave a Reply

Your email address will not be published. Required fields are marked *

Next Post

ಸಿಎಂ ಗೂ ಎದುರಾಯ್ತು ಕೊರೊನಾ ಭೀತಿ

Fri Jul 10 , 2020
ರಾಜ್ಯದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದ್ದು, ಜನತೆ ತತ್ತರಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಮಾರಕ ಕೊರೊನಾ ಸೋಂಕು ಭೀತಿ ಎದುರಾಗಿದೆ. ಈ ಕುರಿತು ಸಿಎಂ ತಮ್ಮ ಕಾರ್ಯಕ್ರಮಗಳಿಂದ ದೂರ ಉಳಿದು ಮನೆಯಲ್ಲೇ ಉಳಿದಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಬೆಂಗಾವಲು ಪಡೆಯ ವಾಹನವೊಂದರ ಚಾಲಕನಿಗೆ ಸೋಂಕು ತಗುಲಿದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಸೋಂಕು ಭೀತಿ ಶುರುವಾಗಿದೆ. ಹೀಗಾಗಿ ಅವರ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ. […]

Advertisement

Wordpress Social Share Plugin powered by Ultimatelysocial