ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಇಂದು ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿರೋಧಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಧಾರವಾಡ ಹೈಕೋರ್ಟ್​ ಪೀಠದಲ್ಲಿ ನಡೆಯಲಿದೆ.

ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ.

ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಎರಡನೇ ದಿನಕ್ಕೆ ಹೋರಾಟ ಕಾಲಿಟ್ಟಿದೆ. ಈ ವೇಳೆ ಶಾಸಕ ಮಹೇಶ್​ ಟೆಂಗಿನಕಾಯಿ ಕೂಡ ಆಗಮಿಸಿ ಪ್ರತಿಭಟನೆಗೆ ಬೆಂಬಲ ನೀಡಿದರು.

ಗುರುವಾರ ರಾತ್ರಿ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಶಾಸಕ‌ ಅರವಿಂದ ಬೆಲ್ಲದ ಒಳಗೊಂಡಂತೆ ಬಿಜೆಪಿ ಕಾರ್ಯಕರ್ತರು ಮಹಾನಗರ ಪಾಲಿಕೆ ಬಳಿ ಇಡೀ ರಾತ್ರಿ ಪ್ರತಿಭಟನೆ ನಡೆಸಿದರು. ಇತ್ತ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿರೋಧಿಸಿ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆಯಾಗಲಿದೆ. ಧಾರವಾಡ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ. ಇದರೊಂದಿಗೆ ಹಕ್ಕುಚ್ಯುತಿ ಪ್ರಶ್ನೆ ಮಾಡಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಸುವರ್ಣ ಕಲಗುಂಟ್ಲಾ ಅವರಿಂದ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದ್ದು, ಈ ಒಂದು ಅರ್ಜಿ ಕೂಡ ಇಂದು ವಿಚಾರಣೆ ಆಗಲಿದೆ.

ಭಟ್ಕಳ : ಸಾರ್ವಜನಿಕ ಗಣೇಶೋತ್ಸವ ಮಂಡಳಿ ಜೊತೆ ಪೊಲೀಸ್​ ಇಲಾಖೆ ಶಾಂತಿ ಸಭೆ

ಕಳೆದ 2 ದಿನಗಳ ಹಿಂದೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ‌ಮಾತನಾಡಿದ ಶಾಸಕ ಅರವಿಂದ ಬೆಲ್ಲದ್​, “ಗಣಪತಿ ಪ್ರತಿಷ್ಠಾಪನೆ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಅದಕ್ಕೆ ಯಾವುದೇ ಉತ್ತರ ಬಂದಿಲ್ಲ. ರಾಣಿ ಚನ್ನಮ್ಮ (ಈದ್ಗಾ ಮೈದಾನ) ಮಹಾನಗರ ಪಾಲಿಕೆಯ ಜಾಗ. ಕಾಂಗ್ರೆಸ್ ಸರ್ಕಾರ ಇರುವುದರಿಂದ ಅಧಿಕಾರಿಗಳ ಮೇಲೆ ಒತ್ತಡ ಹಾಕಲಾಗುತ್ತಿದೆ. ಆದರೆ, ಯಾರೇ ವಿರೋಧ ಮಾಡಿದರೂ, ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವುದು ಕೂಡ ಅಷ್ಟೇ ಸತ್ಯ ಎಂದು ಹೇಳಿದ್ದರು.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಪಟ್ಟು: ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ

ಇನ್ನೊಂದೆಡೆ, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದು, ಅಂತಹ ಧಾರ್ಮಿಕ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಅನುಮತಿ ನೀಡಿದರೆ ಸಂಘರ್ಷವಾಗುತ್ತದೆ. ನಾವು ಬೀದಿಗಿಳಿದು ಹೋರಾಡುತ್ತೇವೆ ಎಂದು ವಿವಿಧ ದಲಿತ ಸಂಘ – ಸಂಸ್ಥೆಗಳ ಮಹಾಮಂಡಳಿ ಮುಖಂಡರಾದ ಗುರುನಾಥ ಉಳ್ಳಿಕಾಶಿ ಹೇಳಿದ್ದಾರೆ.

 

Please follow and like us:

tmadmin

Leave a Reply

Your email address will not be published. Required fields are marked *

Next Post

9 ಕೋಟಿಗೆ ಹರಾಜಾಯ್ತು ರಾಜಕುಮಾರಿ ಡಯಾನಾ ಧರಿಸಿದ್ದ ಐಕಾನಿಕ್​ ಬ್ಲಾಕ್​ ಶೀಪ್​ ಸ್ವೆಟರ್

Fri Sep 15 , 2023
1981ರ ಪೋಲೋ ಪಂದ್ಯ ವೀಕ್ಷಣೆಗೆ ತೆರಳಿದ್ದ ಬ್ರಿಟನ್ ರಾಜಕುಮಾರಿ ಡಯಾನಾ ಧರಿಸಿದ್ದ ಸ್ವೆಟರ್​ ಭಾರಿ ಬೆಲೆಗೆ ಹರಾಜಾಗಿದೆ. ನ್ಯೂಯಾರ್ಕ್​: ಬ್ರಿಟನ್​ ರಾಜಕುಮಾರಿ ಡಯಾನಾ ಅಪಘಾತದಲ್ಲಿ ಸಾವನ್ನಪ್ಪಿದ ಎರಡು ದಶಕಗಳಿಗೂ ಹೆಚ್ಚು ಸಮಯ ಆದರೂ, ಆಕೆಯ ನೆನಪು ಮಾತ್ರ ಜನರಲ್ಲಿ ಅಚ್ಚಳಿಯದೇ ಇದೆ. ಆಕೆಯ ಫ್ಯಾಷನ್​ ಸೆನ್ಸ್​ ಮತ್ತು ಸೌಂದರ್ಯ ಇಂದಿಗೂ ಜನರನ್ನು ಬೆರುಗುಗೊಳಿಸುವುದು ಸುಳ್ಳಲ್ಲ. ಇದೇ ಕಾರಣಕ್ಕೆ ಆಕೆ ಬಳಕೆ ಮಾಡುತ್ತಿದ್ದ ವಸ್ತುಗಳನ್ನು ಜನರು ಇಂದಿಗೂ ಅಭಿಮಾನದಿಂದ ಮುಗಿಬಿದ್ದು ತೆಗೆದುಕೊಳ್ಳುತ್ತಾರೆ. ರಾಜಕುಮಾರಿ […]

Advertisement

Wordpress Social Share Plugin powered by Ultimatelysocial