ಅಪ್ಪ ಅನ್ನುತ್ತಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಪತ್ನಿ ನನ್ನೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ. ಮಗಳು ಕೂಡ ನನ್ನನ್ನು ಅಪ್ಪ ಅನ್ನುತ್ತಿಲ್ಲ ಎಂದು ಮನನೊಂದ ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಈ ಘಟನೆ ಕನಕಪುರದಲ್ಲಿ ನಡೆದಿದ್ದು, ಈಶ್ವರ್(55) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.ಇವರು ಆರ್ಟ್ ಆಫ್ ಲಿವಿಂಗ್ ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.ಅಲ್ಲದೇ, ಒಟ್ಟು 12 ಜನರ ವಿರುದ್ಧ ಆರೋಪ ಮಾಡಿ ಅವರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಪತ್ನಿ ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಮಗಳಿಗೂ ನನ್ನ ಮೇಲೆ ಪ್ರೀತಿ ಇರಲಿಲ್ಲ. ಅವಳು ಅಪ್ಪಾ ಎಂದು ಕರೆಯುತ್ತಲೇ ಇರಲಿಲ್ಲ. ನನ್ನ ಸಂಬಂಧಿಕರು ಕೂಡ ಉತ್ತಮರಲ್ಲ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.ಡೆತ್ ನೋಟ್ ನಲ್ಲಿ ಜಯನಗರ ಪೊಲೀಸ್ ಠಾಣೆಯ ಎಸಿಪಿ ಅವರ ವಿರುದ್ಧವೂ ಬರೆದಿದ್ದಾರೆ. ನನ್ನ ವಿರುದ್ಧ ಪತ್ನಿ ಸುಳ್ಳು ದೂರು ದಾಖಲಿಸಿದಾಗ, ಸರಿಯಾಗಿ ವಿಚಾರಣೆ ನಡೆಸದೆ, ನನ್ನನ್ನು ಠಾಣೆಗೆ ಕರೆಯಿಸಿದ್ದರು. ಹೀಗಾಗಿಯೇ ನಾನು ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ.ಪತ್ನಿ, ಸ್ನೇಹಿತರು, ಸಂಬಂಧಿಕರು, ಜಯನಗರ ಎಸಿಪಿ ಸೇರಿದಂತೆ 12 ಜನರ ಹೆಸರು ಡೆತ್ ನೋಟ್ ನಲ್ಲಿದೆ. ಮೃತ ಈಶ್ವರ್ ಅವರ ಸಹೋದರ ಈ ಕುರಿತು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಾವಿಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು: ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ

Sat Jan 29 , 2022
ಬೆಂಗಳೂರು: ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳಿಗೆ ನೇಮಕಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ತೋಟಗಾರಿಕೆ ಸಚಿವ ಮುನಿರತ್ನ ಶುಕ್ರವಾರ ವಿತರಿಸಿದರು.ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್‌ಬಾಗ್ ಉದ್ಯಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೇಮಕಾತಿ ಆದೇಶ ಪತ್ರಗಳ ವಿತರಣೆ ನಡೆಯಿತು.ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವವರಿಗೆ ವೇತನದಲ್ಲಿ ವ್ಯತ್ಯಾಸ ಇರಲಿದೆ. ಕೌಟುಂಬಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು, ವರ್ಗಾವಣೆ ಕೋರಿ ಅರ್ಜಿಗಳನ್ನು ಬರೆಯಬೇಡಿ. ಸೇವೆ ಮಾಡಲು ಅವಕಾಶ ಸಿಗುವ ಸ್ಥಳದಲ್ಲಿ ಪ್ರಾಮಾಣಿಕವಾಗಿ ಕೆಲಸ […]

Advertisement

Wordpress Social Share Plugin powered by Ultimatelysocial