ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ‌.ಎಲ್.ಮಂಜುನಾಥ್ ಹೃದಯಾಘಾತದಿಂದ ನಿಧನ .

̤

ಬೆಂಗಳೂರು: ಕರ್ನಾಟಕ ಗಡಿ ಮತ್ತು ರಾಜ್ಯ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ಮಧ್ಯರಾತ್ರಿ ನಿಧನರಾದರು.

“ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಸಮೀಪದಲ್ಲಿನ ಅವರ ಸ್ವಗೃಹದಲ್ಲಿ ಶನಿವಾರ ರಾತ್ರಿ 12 ಗಂಟೆ ವೇಳೆಯಲ್ಲಿ ಹೃದಯಾಘಾತದಿಂದ ಹಠಾತ್ ಕೊನೆಯುಸಿರು ಎಳೆದರು” ಎಂದು ಅವರ ಕುಟುಂಬದ ಮೂಲಗಳು  ತಿಳಿಸಿವೆ.

ಅವರಿಗೆ 68 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

“ಭಾನುವಾರ (ಜ.23) ಮಧ್ಯಾಹ್ನ 3 ಗಂಟೆಗೆ ಕುಣಿಗಲ್ ರಸ್ತೆಯ ಕೆಂಪಲಿಂಗನಹಳ್ಳಿಯ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಪಾರ್ಥಿವ ಶರೀರವನ್ನು 12 ಗಂಟೆಯವೆರಗೂ ಕಾಮಾಕ್ಷಿಪಾಳ್ಯದ ನಿವಾಸದಲ್ಲಿ ಇರಿಸಲಾಗಿರುತ್ತದೆ” ಎಂದು ಮೂಲಗಳು ತಿಳಿಸಿವೆ.

1974ರ ಸೆಪ್ಟೆಂಬರ್ 13ರಂದು ಹೈಕೋರ್ಟ್ ನಲ್ಲಿ ವಕೀಲಿಕೆ ಆರಂಭಿಸಿದ್ದ ಮಂಜುನಾಥ್ ಅವರು 2000ದ ಡಿಸೆಂಬರ್ 11ರಂದು ಹೈಕೋರ್ಟ್ ನ್ಯಾಯಮೂರ್ತಿ ಯಾಗಿ ನೇಮಕಗೊಂಡಿದ್ದರು. 2015ರ ಏಪ್ರಿಲ್ 20ರಂದು ಹಿರಿಯ ನ್ಯಾಯಮೂರ್ತಿಯಾಗಿ ನಿವೃತ್ತಿ ಹೊಂದಿದ್ದರು.

ಹೈಕೋರ್ಟ್ ನ್ಯಾಯಮೂರ್ತಿಯಾಗಿ 14 ವರ್ಷ 4 ತಿಂಗಳ ಕಾಲ ವಿವಿಧ ಸ್ತರಗಳಲ್ಲಿ ದುಡಿದಿದ್ದ ಅವರು ವಿಭಾಗೀಯ ಪೀಠದ ನ್ಯಾಯಮೂರ್ತಿಯಾಗಿದ್ದಾಗಲೇ ಸುಮಾರು 10 ಸಾವಿರ ತೀರ್ಪುಗಳನ್ನು ನೀಡಿದ್ದರು. ವಕೀಲರಾಗಿ, ನ್ಯಾಯಮೂರ್ತಿಯಾಗಿ ಅಪಾರ ಜನಪ್ರೀತಿ ಗಳಿಸಿದ್ದ ಅವರು ಹೈಕೋರ್ಟ್ ನಲ್ಲಿ ವಕೀಲರ ಗುಮಾಸ್ತರ ಸಂಘದ ಹುಟ್ಟಿಗೆ ಕಾರಣರಾಗಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕೋವಿಡ್‌ ಕಠಿಣ ನಿಯಮ: ಸ್ವಂತ ಮದುವೆಯನ್ನೇ ರದ್ಧುಗೊಳಿಸಿದ ನ್ಯೂಜಿಲೆಂಡ್‌ ಪ್ರಧಾನಿ .

Sun Jan 23 , 2022
ವೆಲ್ಲಿಂಗ್ಟನ್‌: ಓಮೈಕ್ರಾನ್‌ ಪ್ರಕರಣಗಳು ಹೆಚ್ಚಿದಂತೆ ಕೋವಿಡ್‌ ನಿಯಮಗಳನ್ನು ಕಠಿಣಗೊಳಿಸಿರುವ ನ್ಯೂಜಿಲೆಂಡ್‌ನ ಪ್ರಧಾನಿ ಜೆಸಿಂದಾ ಆರ್ಡೆನ್‌ ಅವರು ಸ್ವಂತ ಮದುವೆಯನ್ನೇ ರದ್ಧುಗೊಳಿಸಿದ್ದಾರೆ. ‘ನನ್ನ ವಿವಾಹವು ಮುಂದಿನ ದಿನಗಳಲ್ಲಿ ನಡೆಯುವುದಿಲ್ಲ’ ಎಂದು ಜೆಸಿಂದಾ ಭಾನುವಾರ ಸ್ಪಷ್ಟಪಡಿಸಿದ್ದಾರೆ. ನ್ಯೂಜಿಲೆಂಡ್‌ನಲ್ಲಿ ಕೋವಿಡ್ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ವಿವಾಹ ಸಮಾರಂಭಕ್ಕೆ ಪೂರ್ಣವಾಗಿ ಲಸಿಕೆ ಪಡೆದ 100 ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ದೀರ್ಘಕಾಲದ ಜೊತೆಗಾರ ಕ್ಲಾರ್ಕ್‌ ಗೆಫಾರ್ಡ್‌ ಅವರ ಜೊತೆ ಆರ್ಡೆನ್ ಅವರ ವಿವಾಹವನ್ನು ಮುಂದಿನ ವಾರಗಳಲ್ಲಿ ನಿಶ್ಚಯಿಸಲಾಗಿತ್ತು. […]

Advertisement

Wordpress Social Share Plugin powered by Ultimatelysocial