ಹೊಸದಾಗಿ ೪೯,೩೧೦ ಮಂದಿಗೆ ಸೋಂಕು ದೃಢ

ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಹೊಸದಾಗಿ 49,310 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,87,945 ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 740 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 30,601 ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ12,87,945 ಮಂದಿ ಸೋಂಕಿತರ ಪೈಕಿ  4,40,135 ಸಕ್ರಿಯ ಪ್ರಕರಣಗಳಿವೆ ಮತ್ತು 8,17,208 ಜನರು ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ವಿಶ್ವಾಸಮತ ಯಾಚನೆಗೆ ನಮಗೆ ಅಗತ್ಯವಾದ ಸಂಖ್ಯಾಬಲ

Fri Jul 24 , 2020
ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಮುಂದುವರಿದಿದೆ. ಈ ನಡುವೆ ನಮಗೆ ಸಂಪೂರ್ಣ ಬಹುಮತವಿದೆ. ಆದಷ್ಟು ಶೀಘ್ರ ನಾವು ಅಧಿವೇಶನ ಕರೆಯುತ್ತೇವೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಭಿಪ್ರಾಯ ಪಟ್ಟಿದ್ದಾರೆ. ನಮ್ಮೆಲ್ಲಾ ಕಾಂಗ್ರೆಸ್ ಶಾಸಕರು ಒಂದಾಗಿದ್ದೇವೆ. ಶೀಘ್ರ ಅಧಿವೇಶನ ಕರೆದು, ನಾವು ಬಹುಮತ ಸಾಬೀತು ಪಡಿಸಲಿದ್ದೇವೆ ಎಂದು ಗೆಹ್ಲೋಟ್ ಹೇಳಿದ್ದಾರೆ. ಡಿಸಿಎಂ ಆಗಿದ್ದ ಸಚಿನ್ ಪೈಲಟ್ ಸರ್ಕಾರದ ವಿರುದ್ಧ ತಿರುಗಿ ನಿಂತ ನಂತರ ರಾಜಕೀಯ ಅಸ್ಥಿರತೆ ಎದುರಾಗಿತ್ತು. ಸಚಿನ್ ಪೈಲಟ್ ಅವರನ್ನು ಡಿಸಿಎಂ […]

Advertisement

Wordpress Social Share Plugin powered by Ultimatelysocial