ಹೊಸ ಇತಿಹಾಸ ಸೃಷ್ಟಿ

ದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಕಂಡ ಫೇಸ್‌ಬುಕ್, ವಿಶ್ವದ ಅತ್ಯಂತ ದೊಡ್ಡ ಕಂಪನಿಗಳ ಸಾಲಿಗೆ ಬಂದು ನಿಂತಿದೆ. ಸೋಶಿಯಲ್ ಮೀಡಿಯಾದ ದಿಗ್ಗಜ ಫೇಸ್‌ಬುಕ್ ಸಂಸ್ಥೆ, ರಿಲಯನ್ಸ್ ಜಿಯೋನಲ್ಲಿ ರೂ.೪೩,೫೭೪ ಕೋಟಿ ಹೂಡಿಕೆ ಮಾಡುವದರ ಮೂಲಕ ಶೇಕಡಾ ೯.೯೯ ಪಾಲನ್ನು ತನ್ನದಾಗಿಸಿಕೊಳ್ಳುವುದರ ಮೂಲಕ ಹೊಸ ಇತಿಹಾಸ ಬರೆದಿದೆ. ರಿಲಯನ್ಸ್ ಜಿಯೋನಲ್ಲಿ ಹೂಡಿಕೆ ಮಾಡುವುದರ ಮೂಲಕ ಟೆಲಿಕಾಂ ಕ್ಷೇತ್ರಕ್ಕೂ ಲಗ್ಗೆಯಿಟ್ಟಿದೆೆ. ವಿಶೇಷ ಅಂದ್ರೆ ತಂತ್ರಜ್ಞಾನ ಕ್ಷೇತ್ರದಲ್ಲಿ ಅತಿ ಹೆಚ್ಚು ಹೂಡಿಕೆಯಾದ ಮೊದಲ ಫಾರೆನ್ ಡೈರೆಕ್ಟ್ ಇನ್ವೆಸ್ಟ್ಮೆಂಟ್ ಇದಾಗಿದೆ. ಇನ್ನು, ಈ ಬಗ್ಗೆ ಮಾತನಾಡಿರುವ ಫೇಸ್‌ಬುಕ್ ಸಂಸ್ಥೆ, ಭಾರತದ ಆರ್ಥಿಕ ಬೆಳವಣಿಗೆ ಮತ್ತು ಜನರ ಸಮೃದ್ಧಿಗೆ ಉತ್ತೇಜನ ನೀಡುವುದರ ಜೊತೆಗೆ ಹೊಸ ಹೊಸ ಪ್ರಯತ್ನಗಳಿಗೆ ಇದು ಸಹಕಾರವಾಗಲಿದೆ ಎಂದು ಹೇಳಿದೆ.

Please follow and like us:

Leave a Reply

Your email address will not be published. Required fields are marked *

Next Post

ಬಳ್ಳಾರಿಯಲ್ಲಿ ಡೆಂಗ್ಯೂ ಅಬ್ಬರ

Wed Apr 22 , 2020
ಬಳ್ಳಾರಿ: ಕೊರೊನಾದತ್ತಲೇ ಎಲ್ಲರ ಗಮನ ಇರುವಾಗ, ಗೊತ್ತೇ ಆಗದೆ ಡೆಂಗ್ಯೂ ಕಾಲಿಟ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ತಗ್ಗಿತು ಎಂದು ನಿಟ್ಟುಸಿರುಬಿಡುವಷ್ಟರಲ್ಲಿ ಇದೀಗ ಡೆಂಗ್ಯೂ ತಾಂಡವವಾಡುತ್ತಿದೆ. ಕೊರೊನಾ ಭೀತಿ ಜೊತೆಜೊತೆಗೆ ಡೆಂಗ್ಯೂ ಶುರುವಾಗಿದ್ದು, ಜನರು ಆತಂಕಗೊಂಡಿದ್ದಾರೆ.  ಬಳ್ಳಾರಿ ಜಿಲ್ಲೆಯಾದ್ಯಂತ ೧೧೦ಕ್ಕೂ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ದಾಖಲಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ. ಒಂದು ವರ್ಷದ ಅವಧಿಗೆ ಬರುತ್ತಿದ್ದ ಪ್ರಕರಣಗಳು ಮೂರು ತಿಂಗಳಲ್ಲೇ ಪತ್ತೆಯಾಗಿವೆ. ಕೊರೊನಾದೊಂದಿಗೆ ಡೆಂಗ್ಯೂ ಕೂಡ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗುತ್ತಿದೆ. ಬಳ್ಳಾರಿ, […]

Advertisement

Wordpress Social Share Plugin powered by Ultimatelysocial