೧೦,೦೦೦ ಜೋಡಿ ಪಾದರಕ್ಷೆ ನೀಡಿದ ಪ್ರಿಯಾಂಕ

ಕೊರೊನಾ ವಿರುದ್ಧ ಹೋರಾಡುತ್ತಿರುವವರಿಗೆ ಒಂದಲ್ಲಾ ಒಂದು ರೀತಿಯಲ್ಲಿ ಸಹಾಯ ಮಾಡುತ್ತಾ, ಅವರ ಕೆಲಸವನ್ನು ಹುರಿದುಂಬಿಸುತ್ತಾ ಬಂದಿರುವ ಗ್ಲೋಬಲ್ ಐಕಾನ್ ಪ್ರಿಯಾಂಕ ಚೋಪ್ರಾ ಈಗ ೧೦,೦೦೦ ಆರೋಗ್ಯ ಕಾರ್ಯಕರ್ತರಿಗೆ ಪಾದರಕ್ಷೆ ನೀಡುವ ಮೂಲಕ ಮತ್ತೆ ಅವರನ್ನು ಬೆಂಬಲಿಸುತ್ತಿದ್ದಾರೆ. ಹರಿಯಾಣ, ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಆರೋಗ್ಯ ಕಾರ್ಯಕರ್ತರಿಗೆ ಶೂಸ್‌ಗಳನ್ನ ದೇಣಿಗೆಯಾಗಿ ನೀಡಿದ್ದಾರೆ. ಒಟ್ಟು ೧೦,೦೦೦ ಜೋಡಿ ಪಾದರಕ್ಷೆಯನ್ನು ನೀಡಿದ್ದು, ಈ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ. ಪ್ರಪಂಚದಾದ್ಯಂತ ಅನೇಕ ಜನರಿಗೆ ಎಂದಿಗಿಂತಲೂ ಹೆಚ್ಚಾಗಿ ನಮ್ಮೆಲ್ಲರ ಬೆಂಬಲ ಬೇಕಿದೆ. ಆರೋಗ್ಯ ಕಾರ್ಯಕರ್ತರು ನಮ್ಮ ಸುರಕ್ಷತೆಗಾಗಿ ಪ್ರತಿದಿನ ಕೆಲಸ ಮಾಡುತ್ತಾ ನಮಗಾಗಿ ಹೋರಾಡುತ್ತಿದ್ದಾರೆ. ಅವರ ಧೈರ್ಯ, ಬದ್ಧತೆ ಮತ್ತು ತ್ಯಾಗದಿಂದ ಅಸಂಖ್ಯಾತ ಜೀವಗಳು ಉಳಿಯುತ್ತಿವೆ ಎಂದು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕಾರ್ಮಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬಾಡಿಗೆ ಕೇಳಬಾರದು: ಕೇಜ್ರಿವಾಲ್..!

Thu Apr 23 , 2020
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಕೆಲಸ ಇಲ್ಲ. ಕೆಲವು ಕಾರ್ಮಿಕರು ಊರುಗಳಿಗೆ ತೆರಳಲಾಗದೇ ಇದ್ದಲ್ಲಿಯೇ ಉಳಿದುಕೊಂಡಿದ್ದಾರೆ ಅಂತವರಿಗೆ  ಮನೆ ಮಾಲೀಕರು ರೆಂಟ್ ಕೇಳುವಂತಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿನಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಂದ ಒಂದು ತಿಂಗಳು ಬಾಡಿಗೆ ವಸೂಲು ಮಾಡಬಾರದು. ‘ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಈ ವಿಷಯದ ಬಗ್ಗೆ ಜಾಗೃತಿ ಅಭಿಯಾನವನ್ನು ಕೈಗೊಳ್ಳಬೇಕು,  ವಿಶೇಷವಾಗಿ ಕಾರ್ಮಿಕರು, ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ […]

Advertisement

Wordpress Social Share Plugin powered by Ultimatelysocial