“ನಟ ಭಯಂಕರ” ನಿಗೆ ಸಾಥ್ ನೀಡಿದ “ಮದಗಜ”.

ತಮ್ಮ ಮಾತಿನ‌ ಮೂಲಕವೇ ಮನೆಮಾತಾಗಿರುವ ಒಳ್ಳೆ ಹುಡುಗ ಪ್ರಥಮ್ ಪ್ರಥಮ ಬಾರಿಗೆ ನಿರ್ದೇಶಿಸಿರುವ ಚಿತ್ರ ” ನಟ ಭಯಂಕರ”. ಈ ಚಿತ್ರದ ನಾಯಕ ಕೂಡ ಪ್ರಥಮ್ ಅವರೆ.

ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. “ಮದಗಜ” ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಡುಗಳನ್ನು ಬಿಡುಗಡೆ ಮಾಡಿದರು.‌ ಲಹರಿ ಸಂಸ್ಥೆಯ ವೇಲು, ಜಿಲ್ಲಾಧಿಕಾರಿ ದಯಾನಂದ್, ಗೀತರಚನೆಕಾರ ಡಾ||ವಿ.ನಾಗೇಂದ್ರಪ್ರಸಾದ್, ಗಿರೀಶ್, ಅರ್ಜುನ್ ಕುಮಾರ್ ಬಂಗಾರಪ್ಪ ಸೇರಿದಂತೆ ಅನೇಕ ಗಣ್ಯರು ಆಡಿಯೋ ರಿಲೀಸ್ ಗೆ ಸಾಕ್ಷಿಯಾದರು.

ಪ್ರಥಮ್ ಕಾನ್ಫಿಡೆನ್ಸ್ ಇರುವ ಹುಡುಗ. ಬಿಗ ಬಾಸ್ ನ ಆರಂಭದಲ್ಲಿ ಇವರನ್ನು ನೋಡಿ, ಏನಪ್ಪಾ, ಹೀಗೆ ಮಾತಾಡುತ್ತಾರೆ? ಅಂದು ಕೊಂಡೆ. ನಂತರ ನಾನೇ ಅವರ ಅಭಿಮಾನಿಯಾದೆ. ಈಗ ನಟನೆ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ರಘು ದೀಕ್ಷಿತ್ ಹಾಗೂ ನಾನು ಇಷ್ಟಪಡುವ ಉಪ್ಪಿ ಸರ್ ಹಾಡಿರುವ ಹಾಡುಗಳು ನನಗೆ ಇಷ್ಟವಾಯಿತು. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿರುತ್ತದೆ ಎಂಬ ನಂಬಿಕೆಯಿದೆ ಎಂದ ಶ್ರೀಮುರಳಿ, ಪ್ರಥಮ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಒಳಿತನ್ನು ಹಾರೈಸಿದರು.

ಜಿಲ್ಲಾಧಿಕಾರಿ ದಯಾನಂದ್, ಲಹರಿ ವೇಲು ಹಾಗೂ ವಿ.ನಾಗೇಂದ್ರಪ್ರಸಾದ್ ಸಹ ಪ್ರಥಮ್ ಬಗ್ಗೆ ಮೆಚ್ಚುಗೆಯ ಮಾತನಾಡಿ ಚಿತ್ರಕ್ಕೆ ಶುಭ ಕೋರಿದರು.

ಇದು ನಮ್ಮ ಚಿತ್ರದ ಮೊದಲ ಪತ್ರಿಕಾಗೋಷ್ಠಿ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ.
ಬಾರಿ ಅಹಂಕಾರವಿರುವ ಮನುಷ್ಯ ಒಬ್ಬರಿಗೆ ಮಾತು ಕೊಟ್ಟಾಗ ಹೇಗೆ ಬದಲಾಗುತ್ತಾನೆ ಎಂಬುದೇ ಚಿತ್ರದ ಮುಖ್ಯ ಕಥಾವಸ್ತು. ಇನ್ನೊಂದು ಕಡೆ ಸ್ಟುಪಿಡ್ ಸೂಪರ್ ಸ್ಟಾರ್ ಹಾಗೂ ಕುರುಡಿ ದೆವ್ವದ ನಡುವೆ ನಡೆಯುವ ಕಥೆ ಕೂಡ ಅನ್ನಬಹುದು. ಇಂದು ಆಡಿಯೋ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಟ್ರೇಲರ್ ಅನಾವರಣಗೊಳಿಸುತ್ತೇವೆ. ಮೇ ಹದಿಮೂರರಂದು ಚಿತ್ರವನ್ನು ತೆರೆಗೆ ತರುತ್ತೇವೆ ಎಂದ ಪ್ರಥಮ್, ಕಾರ್ಯಕ್ರಮಕ್ಕೆ ಆಗಮಿಸಿದ್ದ ಶ್ರೀಮುರಳಿ ಸೇರಿದಂತೆ ಎಲ್ಲಾ ಗಣ್ಯರಿಗೆ ಧನ್ಯವಾದ ತಿಳಿಸಿದರು.

ನಾಯಕಿ ಫ್ರಾನ್ಸ್ ನಿವಾಸಿ ನಿಹಾರಿಕ, ಪ್ರಮುಖ ಪಾತ್ರಧಾರಿ ಚಂದನ, ಸಂಗೀತ ನೀಡಿರುವ ಪ್ರದ್ಯೋತನ್ ಚಿತ್ರದ ಕುರಿತು ಮಾತನಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ನಟಿ ಸ್ವರಾ ಭಾಸ್ಕರ್ ಗೆ ಕೋವಿಡ್ ಪಾಸಿಟಿವ್;

Wed Jan 12 , 2022
ನವದೆಹಲಿ: ಕೋವಿಡ್ ಸೋಂಕು ಎಲ್ಲೆಡೆಯೂ ವೇಗವಾಗಿ ಹರಡುತ್ತಿದೆ. ಅನೇಕ ಸೆಲೆಬ್ರಿಟಿಗಳಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದ್ದು, ನಟಿ ಸ್ವರಾ ಭಾಸ್ಕರ್ ಅವರಲ್ಲೂ ಕೋವಿಡ್ ಸೋಂಕು ದೃಢಪಟ್ಟಿದ್ದು, ತಮ್ಮ ಇನ್‌ಸ್ಟಾಗ್ರಾಮ್​ನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ . ಕೋವಿಡ್ ಹಿನ್ನೆಲೆಯಲ್ಲಿ ಜನವರಿ 5 ರಿಂದ ಐಸೋಲೇಷನ್ ​​ ನಲ್ಲಿದ್ದು , ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ . ನನ್ನ ಜೊತೆಗೆ ಸಂಪರ್ಕಕ್ಕೆ ಬಂದವರು, ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸ್ವರಾ ಮನವಿ ಮಾಡಿದ್ದಾರೆ . ನನಗೆ […]

Advertisement

Wordpress Social Share Plugin powered by Ultimatelysocial