2021ರಲ್ಲಿ ಬಿಜೆಪಿಗೆ 1 ಲಕ್ಷ ರೂ. ದಂಡ ವಿಧಿಸಿದ ಆದೇಶ ಹಿಂಪಡೆದ ಸುಪ್ರೀಂ ಕೋರ್ಟ್‌,

ನವದೆಹಲಿ: ನ್ಯಾಯಾಂಗ ನಿಂದನೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸುಪ್ರೀಂ ಕೋರ್ಟ್‌ (Supreme Court) ೨೦೨೧ರಲ್ಲಿ ಒಂದು ಲಕ್ಷ ರೂ.ದಂಡ ವಿಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದಿನೇಶ್‌ ಮಹೆಸ್ವರಿ ಹಾಗೂ ಬಿ.ಆರ್‌.ಗವಾಯಿ ನೇತೃತ್ವದ ನ್ಯಾಯಪೀಠವು, ದಂಡದ ಆದೇಶವನ್ನು ರದ್ದುಗೊಳಿಸಿದೆ.೨೦೨೦ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಅಪರಾಧದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಪ್ರಕಟಣೆ ತಿಳಿಸುವಲ್ಲಿ ಬಿಜೆಪಿಯು ಸರ್ವೋಚ್ಚ ನ್ಯಾಯಾಲಯದ ನಿರ್ದೇಶಗಳನ್ನು ಸರಿಯಾಗಿ ಪಾಲಿಸಿಲ್ಲ ಎಂದು ಕೋರ್ಟ್‌ ೨೦೨೧ರಲ್ಲಿ ಬಿಜೆಪಿಗೆ ಒಂದು ಲಕ್ಷ ರೂ. ದಂಡ ವಿಧಿಸಿತ್ತು. ಕಡಿಮೆ ಪ್ರಸರಣ ಇರುವ ಪತ್ರಿಕೆಗಳಲ್ಲಿ ಮಾತ್ರ ಅಭ್ಯರ್ಥಿಗಳ ಮಾಹಿತಿ ಕುರಿತು ಜಾಹೀರಾತು ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು. ಆದರೆ, ಈಗ ನ್ಯಾಯಾಲಯವು ಆದೇಶ ಹಿಂಪಡೆದಿದೆ.ಮರುಪರಿಶೀಲನಾ ಅರ್ಜಿಯ ವಿಚಾರಣೆ ವೇಳೆ ಪ್ರಕರಣದಲ್ಲಿ ಉದ್ದೇಶಪೂರ್ವಕ ಕೃತ್ಯ ಸಾಬೀತಾಗದ ಕಾರಣ ಆದೇಶ ಹಿಂಪಡೆಯಲಾಗಿದೆ. ಬಿಜೆಪಿ ಮಾತ್ರವಲ್ಲ, ಸಿಪಿಎಂ ಹಾಗೂ ಎನ್‌ಸಿಪಿಗೆ ತಲಾ ಐದು ಲಕ್ಷ ರೂ. ಹಾಗೂ ಕಾಂಗ್ರೆಸ್‌, ಆರ್‌ಜೆಡಿ, ಜೆಡಿಯುಗೆ ತಲಾ ಒಂದು ಲಕ್ಷ ರೂ. ದಂಡ ವಿಧಿಸಲಾಗಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಭದ್ರತೆಗೆ ಶಿಕ್ಷಕರ ನಿಯೋಜನೆ ಟಿಡಿಪಿ ಆರೋಪ.

Tue Feb 28 , 2023
  ಮದ್ಯದಂಗಡಿಗಳನ್ನು ಬಂದ್ ಮಾಡಲು ಶಿಕ್ಷಕರನ್ನು ಬಲವಂತವಾಗಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಒತ್ತಾಯಿಸುತ್ತಿದ್ದಾರೆ ಎಂದು ಟಿಡಿಪಿ ರಾಷ್ಡ್ರೀಯ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ವಾಗ್ದಾಳಿ ನಡೆಸಿದ್ದಾರೆ.ಶಿಕ್ಷಕರನ್ನು ಈ ಕೆಲಸಕ್ಕೆ ಆಂಧ್ರ ಪ್ರದೇಶ ಸರ್ಕಾರ ಬಳಸಿಕೊಳ್ಳುವ ಮೂಲಕ ಶಿಕ್ಷಕ ಸಮುದಾಯಕ್ಕೆ ಅವಮಾನ ಮಾಡಿದೆ ಎಂದು ದೂರಿದ್ದಾರೆ.ಆಂಧ್ರಪ್ರದೇಶ ಶಿಕ್ಷಕರ ಫೆಡರೇಶನ್ ಮುಖಂಡರು ಚಂದ್ರಗಿರಿ ವಿಧಾನಸಭಾ ಕ್ಷೇತ್ರದ ಭಾಗ್ಯನಗರದಲ್ಲಿ ಕ್ಯಾ ಲೋಕೇಶ್ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ವಿವರಿಸಿದ […]

Advertisement

Wordpress Social Share Plugin powered by Ultimatelysocial