10 ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ

 

ವದೆಹಲಿ: 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್, ಜಾರ್ಖಂಡ್ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ನೇಮಕ ಮಾಡಲಾಗಿದೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದು, ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ.

ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್, ಸಿಕ್ಕಿಂ ರಾಜ್ಯಪಾಲರಾಗಿ ಲಕ್ಷ್ಮಣ್ ಪ್ರಸಾದ್ ಆಚಾರ್ಯ, ಜಾರ್ಖಂಡ್ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್, ಅಸ್ಸಾಂ ರಾಜ್ಯಪಾಲರಾಗಿ ಗುಲಾಬ್ ಚಂದ್ ಕಟಾರಿಯಾ ಮತ್ತು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಶಿವ ಪ್ರತಾಪ್ ಶುಕ್ಲಾ ನೇಮಕಗೊಂಡಿದ್ದಾರೆ.

ಮಣಿಪುರದ ಗವರ್ನರ್ ಲಾ ಗಣೇಶನ್ ಅವರನ್ನು ನಾಗಾಲ್ಯಾಂಡ್ ಗವರ್ನರ್ ಆಗಿ ನೇಮಿಸಲಾಗಿದೆ. ಬಿಹಾರದ ಗವರ್ನರ್ ಫಾಗು ಚೌಹಾಣ್ ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಬಿಹಾರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ನ್ಯಾಯಮೂರ್ತಿ(ನಿವೃತ್ತ) ಎಸ್. ಅಬ್ದುಲ್ ನಜೀರ್ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಆಂಧ್ರಪ್ರದೇಶದ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಛತ್ತೀಸ್‌ಗಢದ ರಾಜ್ಯಪಾಲರಾದ ಅನುಸೂಯಾ ಉಯಿಕ್ಯೆ ಅವರನ್ನು ಮಣಿಪುರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರೊ. ಕೃಷ್ಣಶಾಸ್ತ್ರಿಗಳ ಬಹುಮುಖ ವ್ಯಕ್ತಿತ್ವದ, ಬಹುಮುಖ ಪ್ರತಿಭೆ.

Sun Feb 12 , 2023
ಪ್ರೊ. ಕೃಷ್ಣಶಾಸ್ತ್ರಿಗಳ ಬಹುಮುಖ ವ್ಯಕ್ತಿತ್ವದ, ಬಹುಮುಖ ಪ್ರತಿಭೆಯ ಜೀವನವೇ ಒಂದು ಪವಾಡ ಸದೃಶವಾದದ್ದು. ಅವರು ಬಾಳಿದ ಜೀವನಮೌಲ್ಯಗಳು ಇಂದಿನ ಸಮಾಜದಲ್ಲಿ ಕಾಣಸಿಗುವಂಥವುಗಳಲ್ಲ. ಹತ್ತೊಂಬತ್ತನೆಯ ಶತಮಾನದಲ್ಲಿ ಅವತರಿಸಿದ ಶ್ರೇಷ್ಠ ಮಹನೀಯರಂತೆ ಕೃಷ್ಣಶಾಸ್ತ್ರಿಗಳು ತಮ್ಮ ಬದುಕಿನ ಬೆಲೆಯನ್ನು ಅರಿತು ಅದಕ್ಕೆ ತಕ್ಕಂತೆ ಬಾಳಿ ತಮ್ಮ ಜೀವನವನ್ನು ಸಾರ್ಥಕ ಮಾಡಿಕೊಂಡದ್ದೇ ಅಲ್ಲದೆ ಸಮಾಜದ ಮೌಲ್ಯಗಳಿಗೂ ನಿದರ್ಶನಗಳಾಗಿ ನಿಂತರು. ಅವರ ಕನ್ನಡ ರೂಪಾಂತರ ಕೃತಿಗಳಾದ ‘ವಚನ ಭಾರತ’ ಮತ್ತು ‘ಕಥಾಮೃತ’ ಕೃತಿಗಳು ಕನ್ನಡಿಗರ ಮನೆ ಮನೆಗಳಲ್ಲಿ, […]

Advertisement

Wordpress Social Share Plugin powered by Ultimatelysocial