ಸಿಡಿಲು ಬಡಿದು ಮೃತಪಟ್ಟವರ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ

 

ಮೊಳಕಾಲ್ಮುರು: ತಾಲ್ಲೂಕಿನ ಮೇಗಲಹಟ್ಟಿಯಲ್ಲಿ ಗ್ರಾಮದಲ್ಲಿ ಮೇ 4ರಂದು ಸಿಡಿಲು ಬಡಿದು ಮೃತಪಟ್ಟಿದ್ದ ತಾಯಿ, ಮಗನ ಕುಟುಂಬಕ್ಕೆ ಶುಕ್ರವಾರ ಸರ್ಕಾರದ ಪರಿಹಾರವನ್ನು ಸಚಿವ ಬಿ. ಶ್ರೀರಾಮುಲು ವಿತರಿಸಿದರು.

ಘಟನೆಯಲ್ಲಿ ಕುರಿಗಾಹಿ ವೃತ್ತಿ ಮಾಡುತ್ತಿದ್ದ ನಾಯಕ ಜನಾಂಗದ ತಾಯಿ ಹಾಗೂ ಮಗ ಇಬ್ಬರು ಮೃತಪಟ್ಟಿದ್ದು, ಪ್ರಕೃತಿ ವಿಕೋಪ ನಿಧಿಯಿಂದ ತಲಾ ₹5 ಲಕ್ಷದಂತೆ ₹10 ಲಕ್ಷವನ್ನು ಕುಟುಂಬ ಸದಸ್ಯರಿಗೆ ವಿತರಣೆ ಮಾಡಲಾಯಿತು.

ಮಳೆಗಾಲದಲ್ಲಿ ಕುರಿ, ದನಗಾಹಿಗಳು, ಕೂಲಿ ಕಾರ್ಮಿಕರು ಎಚ್ಚರದಿಂದ ಇರಬೇಕು. ಹೊಲದಲ್ಲಿ ಇದ್ದಾಗ ಮಳೆ ಬಂದಲ್ಲಿ ವೈಜ್ಞಾನಿಕವಾಗಿ ಆಸರೆ ಪಡೆಯಬೇಕು. ನಿರ್ಲಕ್ಷ್ಯ ಮಾಡಿದಲ್ಲಿ ಪ್ರಾಣ ಹಾನಿಯಾಗುವ ಸಾಧ್ಯತೆ ಇರುವ ಕಾರಣ ನಿರ್ಲಕ್ಷ್ಯ ಮಾಡಬಾರದು ಎಂದು ಸಚಿವ ಬಿ. ಶ್ರೀರಾಮುಲು ಮನವಿ ಮಾಡಿದರು.

ತಹಶೀಲ್ದಾರ್ ಟಿ. ಸುರೇಶ್ ಕುಮಾರ್, ಬಿಜೆಪಿ ಮಂಡಲಾಧ್ಯಕ್ಷ ಡಾ.ಪಿ.ಎಂ. ಮಂಜುನಾಥ್ ಸಿಬ್ಬಂದಿ ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಆರೋಗ್ಯ ಇಲಾಖೆ ಸುಪರ್ದಿಗೆ ಬಿಬಿಎಂಪಿ ವ್ಯಾಪ್ತಿಯ 51 ಆರೋಗ್ಯ ಕೇಂದ್ರ!

Sat May 7 , 2022
  ಬೆಂಗಳೂರು, ಮೇ 6: “ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರಣ ಹೊಂದಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಾಗೂ ಸಮುದಾಯ ಕೇಂದ್ರಗಳನ್ನು ಸರ್ಕಾರವೇ ನೇರವಾಗಿ ನಿರ್ವಹಿಸಲು […]

Advertisement

Wordpress Social Share Plugin powered by Ultimatelysocial