₹10 ಸಾವಿರ ನಗದು ಬಹುಮಾನ ಘೋಷಣೆ

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್‌ನ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶವು 2 ತಿಂಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸಾಮರಸ್ಯಕ್ಕೆ ಸಂಬಂಧಿಸಿದಂತೆ ನಗರ, ರಾಜ್ಯ ಹಾಗೂ ದೇಶಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಮುಖ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸುತ್ತಿದೆ.ಕೋಶದ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ಗುರುತಿಸಿ ಹಾಗೂ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ನೈಪುಣ್ಯತೆಯೊಂದಿಗೆ ಕರ್ತವ್ಯ ನಿರ್ವಹಿಸುವಂತೆ ಪ್ರೋತ್ಸಾಹಿಸಲು ನಗರ ಪೊಲೀಸ್ ಕಮಿಷನರ್‌ ಎನ್‌.ಶಶಿಕುಮಾರ್‌ ಅವರು ₹10ಸಾವಿರ ನಗದು ಬಹುಮಾನ ಘೋಷಿಸಿದ್ದಾರೆ.

 

ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಈ ಘಟಕದ ಸಿಬ್ಬಂದಿಗೆ ಕಾಲಕಾಲಕ್ಕೆ ಸುಧಾರಿತ ತರಬೇತಿ ಹಾಗೂ ಸುಧಾರಿತ ತಂತ್ರಜ್ಞಾನಗಳ ಬಳಕೆಯ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶವು 2 ತಿಂಗಳಿಂದ ಸತತವಾಗಿ ಹಲವಾರು ಅಪರಾಧ ಪ್ರಕರಣಗಳು ಹಾಗೂ ಸಾಮಾಜಿಕ ಸಾಮರಸ್ಯವನ್ನು ಕದಡುವ ಘಟನೆಗಳನ್ನು ತಡೆಯುವಲ್ಲಿ ಯಶಸ್ವಿಯಾಗಿದೆ. ಈ ಘಟಕವು ಮಂಗಳೂರು ನಗರ ಕಮೀಷನರೇಟ್‌, ದಕ್ಷಿಣ ಕನ್ನಡ ಜಿಲ್ಲೆ, ರಾಜ್ಯ ಹಾಗೂ ದೇಶದ ಇತರ ಸಂಸ್ಥೆಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿದೆ.

ಅಪರಾಧ ಚಟುವಟಿಕೆಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಫೇಸ್‌ಬುಕ್‌ ಟ್ರೋಲ್‌ ಪೇಜ್‌ಗಳ ಮೇಲೆ, ಹ್ಯಾಂಡ್ಲರ್‌ಗಳ ಮೇಲೆ ಹಾಗೂ ಇತರ ಪ್ರಮುಖ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಪೇಜ್‌ ಮತ್ತು ಗ್ರೂಪ್‌ಗಳ ಮೇಲೆ ಸತತ ನಿಗಾ ವಹಿಸಿದೆ. ಇವುಗಳಿಂದ ಉಂಟಾಗಬಹುದಾದ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳು ಉಲ್ಬಣಿಸದಂತೆ ತಡೆಯುವಲ್ಲಿ ಯಶಸ್ವಿಯಾಗಿದೆ. ಮಂಗಳೂರು ನಗರ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶದ ಕಾರ್ಯನಿರ್ವಹಣೆಯನ್ನು ಗುರುತಿಸಿ ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್‌ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶದಲ್ಲಿ ರಾಜಾ ಎಂ., ಅಕಾಶ್‌ ನಾಯ್ಕ್‌, ಸಿದ್ದಪ್ಪ ಕಲ್ಮಡ, ವರ್ಗೀಸ್‌ ಸ್ಕರಿಯ, ಶರಣಬಸವ, ಸುರೇಶ್‌ ಕಾರ್ಯನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಚ್ಚನ್ ಪಾಂಡೆ ಬಾಕ್ಸ್ ಆಫೀಸ್ ಭವಿಷ್ಯ: ಅಕ್ಷಯ್ ಕುಮಾರ್ ಮತ್ತು ಸಾಜಿದ್ ನಾಡಿಯಾಡ್ವಾಲಾ ಅವರ ಚಿತ್ರವು ರೂ. 15 ಕೋಟಿ!

Fri Mar 18 , 2022
ಅಂತಿಮವಾಗಿ, ಬಚ್ಚನ್ ಪಾಂಡೆ ರೂಪದಲ್ಲಿ ಔಟ್-ಅಂಡ್-ಔಟ್ ಕಮರ್ಷಿಯಲ್ ಸಿನಿಮಾ ಈ ಶುಕ್ರವಾರ ಆಗಮಿಸುತ್ತದೆ. ಕೊನೆಯದು ಸೂರ್ಯವಂಶಿ ಮತ್ತು ಅದು ಕೂಡ ಅಕ್ಷಯ್ ಕುಮಾರ್ ಅಭಿನಯದ ಚಿತ್ರ. ಈಗ ಈ ಸಾಜಿದ್ ನಾಡಿಯಾಡ್ವಾಲಾ ಚಿತ್ರದಲ್ಲಿ ತಡ್ಕಾ ಮತ್ತು ಮಸಾಲೆ ಸೇರಿಸಲಾಗಿದೆ, ಇದು ಸಾಂಕ್ರಾಮಿಕ ಸಮಯದಲ್ಲಿಯೇ ಸುತ್ತಿಕೊಂಡಿದೆ ಮತ್ತು ಮಲ್ಟಿಪ್ಲೆಕ್ಸ್‌ಗಳು ಮತ್ತು ಎ, ಬಿ ಮತ್ತು ಸಿ ಸೆಂಟರ್‌ಗಳಲ್ಲಿ ಸಿಂಗಲ್ ಸ್ಕ್ರೀನ್ ಪ್ರೇಕ್ಷಕರನ್ನು ಪೂರೈಸುವ ಗುರಿಯನ್ನು ಹೊಂದಿದೆ. ಈ ಚಿತ್ರವು ವಾಸ್ತವವಾಗಿ ಪುಷ್ಪಾ […]

Advertisement

Wordpress Social Share Plugin powered by Ultimatelysocial