125 ಹೆಸರು ಫೈನಲ್: ಮಾರ್ಚ್‌ 15 ರೊಳಗೆ ಕಾಂಗ್ರೆಸ್‌ ಮೊದಲ ಪಟ್ಟಿ?

ಬೆಂಗಳೂರು: ಕಾಂಗ್ರೆಸ್ ಟಿಕೆಟ್‌ ಗೊಂದಲ ಬಗೆಹರಿಸುವ ನಿಟ್ಟಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆ ಗುರುವಾರವೂ ಮುಂದುವರಿಯಲಿದ್ದು, ಬಹುತೇಕ 125 ಕ್ಷೇತ್ರಗಳಿಗೆ ಸಂಭವನೀಯ ಓರ್ವ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿದೆ.

ಸ್ಕ್ರೀನಿಂಗ್ ಕಮಿಟಿಯಲ್ಲಿ ಅಂತಿಮಗೊಳಿಸಿದ ಹೆಸರುಗಳಿಗೆ ಕೇಂದ್ರ ಚುನಾವಣಾ ಸಮಿತಿಯ ಅಂತಿಮ ಮುದ್ರೆ ಬಿದ್ದ ಬಳಿಕ ಮಾರ್ಚ್‌ 15 ರೊಳಗಾಗಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.

ಹಾಲಿ ಶಾಸಕರನ್ನು ಒಳಗೊಂಡಂತೆ ಕಳೆದ ಬಾರಿಯ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋತು ಈ ಬಾರಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿರುವ ಅಭ್ಯರ್ಥಿಗಳಿಗೆ ಮೊದಲ ಪಟ್ಟಿಯಲ್ಲಿ ಮಣೆ ಹಾಕಲಾಗಿದೆ. ಹಾಲಿ ಶಾಸಕರ ಹೊರತಾಗಿ ಉಳಿದ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಯಾವುದೇ ಬಂಡಾಯದ ಸ್ಥಿತಿ ನಿರ್ಮಾಣ ಆಗದಂತೆ ಎಚ್ಚರಿಕೆಯ ಹೆಜ್ಜೆಯನ್ನು ಇಡಲಾಗುತ್ತಿದೆ.

69 ಜತೆ 2 ಹಾಲಿ ಶಾಸಕರಿಗೆ ಟಿಕೆಟ್ ಫಿಕ್ಸ್
69 ಜತೆ 2 ಹಾಲಿ ಶಾಸಕರಿಗೆ ಟಿಕೆಟ್ ಫಿಕ್ಸ್ ಆಗಿದೆ. ಈ ಪೈಕಿ ನರಸಿಂಹ ರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ತಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಿಸಿದ್ದರು. ಆದರೆ ಅವರನ್ನು ಸಮಾಧಾನಪಡಿಸುವ ಕೆಲಸವೂ ನಡೆಯುತ್ತಿದೆ. ಉಳಿದಂತೆ 70 ಕ್ಷೇತ್ರಗಳಲ್ಲಿ ಎರಡು – ಮೂರು ಅಭ್ಯರ್ಥಿಗಳಿದ್ದು, ಈ ಕ್ಷೇತ್ರದಲ್ಲೂ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಸ್ಕ್ರೀನಿಂಗ್ ಕಮಿಟಿಯಲ್ಲಿ ನಿರ್ಧಾರ ಮಾಡಲಾಗಿದೆ.
ಸ್ಕ್ರೀನಿಂಗ್ ಕಮಿಟಿಗೂ ಜಟಿಲ
ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸ್ಕ್ರೀನಿಂಗ್ ಕಮಿಟಿಗೂ ಜಟಿಲವಾಗಿದೆ. ಬಂಡಾಯದ ಬಿಸಿ ಭುಗಿಲೇಳದಂತೆ ಅಭ್ಯರ್ಥಿ ಆಯ್ಕೆಯ ಸಂದರ್ಭದಲ್ಲಿ ರಾಜ್ಯ ನಾಯಕರು ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ದೊಡ್ಡ ಸಂಖ್ಯೆಯ ಆಕಾಂಕ್ಷಿಗಳಿದ್ದು, ಅವರಿಗೆ ಯಾವುದೇ ಅಸಮಾಧಾವನ್ನು ಬಹಿರಂಗವಾಗಿ ವ್ಯಕ್ತಪಡಿಸದಂತೆ ಸಂಧಾನ ಸೂತ್ರಗಳನ್ನು ಹೆಣೆಯಲಾಗುತ್ತಿದೆ.

ಶೀಘ್ರದಲ್ಲೇ ಮೊದಲ ಪಟ್ಟಿ ಬಿಡುಗಡೆಗೆ ಒತ್ತಡ
ಚುನಾವಣಾ ಪ್ರಚಾರದ ದೃಷ್ಟಿಯಲ್ಲಿ ಆದಷ್ಟು ಶೀಘ್ರದಲ್ಲೇ ಮೊದಲ ಪಟ್ಟಿ ಬಿಡುಗಡೆ ಮಾಡುವಂತೆ ಆಕಾಂಕ್ಷಿಗಳ ಒತ್ತಡವೂ ಜಾಸ್ತಿಯಾಗುತ್ತಿದೆ. ಪಟ್ಟಿ ಪ್ರಕಟ ವಿಳಂಬ ಆದಷ್ಟು ಕ್ಷೇತ್ರದಲ್ಲಿ ಪ್ರಚಾರಕ್ಕೂ ಅಡ್ಡಿ ಉಂಟಾಗಲಿದೆ ಎಂಬುವುದು ಆಕಾಂಕ್ಷಿಗಳ ಆತಂಕ.
ಅಭ್ಯರ್ಥಿಗಳ ಹೆಸರು ಅಧಿಕೃತವಾಗಿ ಅಂತಿಮ ಆಗದೆ ಇದ್ದರೆ ಕೆಲವು ಮೌಕಿಕವಾಗಿ ಕೆಲವರಿಗೆ ಚುನಾವಣೆಗೆ ಸಿದ್ದತೆ ನಡೆಸುವಂತೆ ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿಯೂ ಇದೆ. ಒಟ್ಟಿನಲ್ಲಿ ಮಾರ್ಚ್ 15 ರೊಳಗಾಗಿ ಮೊದಲ ಪಟ್ಟಿ ಪ್ರಕಟ ಮಾಡಲು ಎಲ್ಲಾ ರೀತಿಯ ಕಸರತ್ತನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಗುರುವಾರದ ಸ್ಕ್ರೀನಿಂಗ್ ಕಮಿಟಿ ಸಭೆಯೂ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂಸದೆ ಸುಮಲತಾ BJP ಸೇಪಡೆಗೆ ಮುಹೂರ್ತ ಫಿಕ್ಸ್?

Thu Mar 9 , 2023
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಸುಮಲತಾ ಪಕ್ಷ ಸೇರ್ಪಡೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ. ಸಂಸದೆ ಸುಮಲತಾ ನಾಳೆಯೇ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆಗೆ ಯೋಜನೆ ರೂಪಿಸಲಾಗಿತ್ತು. ಆದರೆ ಸರ್ಕಾರಿ ಕಾರ್ಯಕ್ರಮವಾಗಿದ್ದರಿಂದ ನಾಳೆ ಸುಮಲತಾ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ನಾಳೆ ಸುಮಲತಾ ನಡೆಸಲಿರುವ […]

Advertisement

Wordpress Social Share Plugin powered by Ultimatelysocial