18 ಷರತ್ತು ವಿಧಿಸಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕೊನೆಗೂ ಅನುಮತಿ

Ganeshotsava in Idga ground:ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ 18 ಷರತ್ತು ಹಾಕುವ ಮೂಲಕ ಅನುಮತಿ ನೀಡಿದ್ದಾರೆ.ಯುಕ್ತ ಈಶ್ವರ ಉಳ್ಳಾಗಡ್ಡಿ ಪ್ರತಿಕ್ರಿಯೆ

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ‌ಕೊನೆಗೂ ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಅನುಮತಿ‌ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಎರಡು ದಿನ ಕಾಲ ನಿರಂತರ ಹೋರಾಟ ನಡೆಸಿತ್ತು. ಕೊನೆಗೂ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಷರತ್ತುಬದ್ಧ ಅನುಮತಿ ನೀಡಿದ್ದಾರೆ.

ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹಲವು ಷರತ್ತುಗಳನ್ನು ಹಾಕಿ ಅನುಮತಿ ನೀಡಲಾಗಿದೆ. ಆ ಪ್ರಮಖ‌ ಷರತ್ತುಗಳು ಇಂತಿವೆ:

ಅನುಮತಿ ಕುರಿತು ಅರವಿಂದ ಬೆಲ್ಲದ ಹಾಗೂ ಮಹೇಶ ಟೆಂಗಿನಕಾಯಿ ಪ್ರತಿಕ್ರಿಯೆ

  • ಕಡ್ಡಾಯವಾಗಿ ಪೊಲೀಸ್ ಆಯುಕ್ತರಿಂದ ಅನುಮತಿ ಪಡೆಯಬೇಕು.
  • ಸೆ.19 ರಂದು ಬೆಳಗ್ಗೆ 6 ಗಂಟೆಯಿಂದ 21 ರಂದು ಮಧ್ಯಾಹ್ನ 12 ಗಂಟೆಯವರೆಗೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ.
  • 30×30 ಅಳತೆಯ ಪೆಂಡಾಲ್​​​​ಗೆ ಮಾತ್ರ ಅವಕಾಶ.
  • ಗಣೇಶ ಉತ್ಸವದ ಹೊರತಾಗಿ ಯಾವುದೇ ಬಾವುಟ, ಬಿತ್ತಪತ್ರ, ವಿವಾದಿತ ಫೋಟೋ ಪ್ರದರ್ಶನ ನಿಷೇಧ.
  • ಮನರಂಜನಾ ಕಾರ್ಯಕ್ರಮಗಳಿಗೂ ನಿಷೇಧ.
  • ಅನವಶ್ಯಕ ಗಲಭೆ, ಗಲಾಟೆಗಳಿಗೆ ಆಯೋಜಕರೆ ಹೊಣೆ.
  • ಅನ್ಯಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವಂತಿಲ್ಲ.
  • ಪ್ರಚೋದನಕಾರಿ ಹೇಳಿಕೆ, ಭಾಷಣ ನಿಷೇಧ ಸೇರಿದಂತೆ 18 ಷರತ್ತುಗಳನ್ನು ಮಹಾನಗರ ಪಾಲಿಕೆ ವಿಧಿಸಿದೆ.

ಪಾಲಿಕೆ ನಿರ್ಧಾರಕ್ಕೆ ಅರವಿಂದ ಬೆಲ್ಲದ ಹಾಗೂ ಮಹೇಶ ಟೆಂಗಿನಕಾಯಿ ಸ್ವಾಗತ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದ ಬೆನ್ನಲೇ ಪಾಲಿಕೆ ಕ್ರಮವನ್ನು ಶಾಸಕರಾದ ಮಹೇಶ ಟೆಂಗಿನಕಾಯಿ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಹಿಂಬಾಗಿಲಿನಿಂದ ಅಂಜುಮನ್ ಸಂಸ್ಥೆ ಮೂಲಕ ಕೋರ್ಟ್ ರೀಟ್ ಅರ್ಜಿ ಸಲ್ಲಿಸಿದೆ. ಕೊನೆ ಕ್ಷಣದಲ್ಲಿಯಾದರು ಸರ್ಕಾರ ಎಚ್ಚೆತ್ತುಕೊಂಡು ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದೆ. ಮುಂದೆ ಕೂಡ ಹಿಂದೂ ಹಬ್ಬಗಳ ಆಚರಣೆಗೆ ಅಡೆತಡೆಗಳನ್ನು ಒಡ್ಡಬಾರದು. ನ್ಯಾಯಾಲಯ ಅತ್ಯುತ್ತಮ ತೀರ್ಪು ಕೊಟ್ಟಿದೆ, ನಮಗೆ ದೊಡ್ಡ ಜಯ ಸಿಕ್ಕಿದೆ.
ಈದ್ಗಾ ಮೈದಾನದಲ್ಲಿ ವಿಜೃಂಭಣೆಯಿಂದ ಹಬ್ಬ ಆಚರಣೆ ಮಾಡುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ, ನ್ಯಾಯಾಲಯ ಅನುಮತಿ ಕೊಟ್ಟ ನಂತರವೂ ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗಿದೆ. ಮತ ಬ್ಯಾಂಕ್​ಗಾಗಿ ಕಾಂಗ್ರೆಸ್ ತುಚ್ಚೀಕರಣ ರಾಜಕಾರಣ ಮಾಡುತ್ತಿದೆ. ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿಯೂ ಠರಾವು ಮಾಡಲಾಗಿತ್ತು. ಅಂಜುಮನ್ ಸಂಸ್ಥೆ ಮೇಲಿಂದ ಮೇಲೆ ಕೋರ್ಟಿಗೆ ಹೋಗುವ ಮೂಲಕ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಯತ್ನ ಮಾಡಿದೆ.

ಮೇಲಿಂದ ಮೇಲೆ ಕೋರ್ಟ್​ಗೆ ಹೋಗಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ. ಕೊನೆಗೂ ನ್ಯಾಯಾಲಯದಿಂದಾಗಿ ನಮಗೆ ಅನುಮತಿ ಸಿಕ್ಕಿದೆ. ಇದು ಗಣಪತಿ ಭಕ್ತರ ಗೆಲುವು. ಸಿದ್ದರಾಮಯ್ಯ ಸರ್ಕಾರ ಎಲ್ಲರ ಮತಗಳನ್ನು ತೆಗೆದುಕೊಂಡು ಅಧಿಕಾರಕ್ಕೆ ಬಂದಿದೆ. ಅದನ್ನು ಗಮನದಲ್ಲಿಟ್ಟುಕೊಂಡು ಅವರು ಕೆಲಸ ಮಾಡಬೇಕಿತ್ತು. ಆದರೆ, ಅಲ್ಪಸಂಖ್ಯಾತರ ಓಲೈಕೆಗೆ ಅದು ಮುಂದಾಗಿತ್ತು. ಈಗಲಾದರೂ ಸರ್ಕಾರ ಯಾವುದೇ ರೀತಿ ಆಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದರು.

ಆದೇಶ ಪ್ರಕಾರ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ -ಈಶ್ವರ ಉಳ್ಳಾಗಡ್ಡಿ: ಆಗಸ್ಟ್‌ 31 ರಂದು ನಡೆದ ಸಾಮಾನ್ಯ ಸಭೆಯಲ್ಲಿ ತೆಗೆದುಕೊಂಡು ಠರಾವಿನ ಆದೇಶ ಪ್ರಕಾರ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. 3 ದಿನಗಳವರೆಗೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಕಾನೂನು ಸುವ್ಯವಸ್ಥೆಗಾಗಿ ನಾವು 18 ಷರತ್ತುಗಳನ್ನು ಹಾಕಿದ್ದೇವೆ ಎಂದು ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಹೇಳಿದರು. ಮಹಾನಗರ ಪಾಲಿಕೆಯಲ್ಲಿ ಅನುಮತಿ ನೀಡಿದ ಬಳಿಕ ಮಾತನಾಡಿದ ಅವರು, ಪೆಂಡಾಲ್ ಅಳತೆ ಸೇರಿದಂತೆ ಹಲವು ಷರತ್ತುಗಳನ್ನು ಹಾಕಲಾಗಿದೆ.

ಅನ್ಯ ಧರ್ಮದವರಿಗೆ ಧಕ್ಕೆ ಉಂಟು ಮಾಡದಂತೆ ಷರತ್ತುಗಳನ್ನು ಹಾಕಿದ್ದೇವೆ. ಸೆಕ್ಷನ್ 59 ಪ್ರಕಾರ ನಮಗೆ ಉಚಿತವಾಗಿ ಕೊಡಲು ಸಹ ಅವಕಾಶ ಇದೆ. ಯಾವುದೇ ಬಾಡಿಗೆ ಪಡೆಯದೆ ಈಗ ನಾವು ಒಂದು ವರ್ಷಕ್ಕೆ ಮಾತ್ರ ಅನುಮತಿ ಕೊಟ್ಟಿದ್ದೇವೆ. ನಮ್ಮ ಮೇಲೆ ಅನುಮತಿ ಕೊಡಬಾರದು ಅಂತ ಯಾರ ಒತ್ತಡವೂ ಇರಲಿಲ್ಲ. ನಾನು ಸ್ಪಷ್ಟ ಪಡಿಸುತ್ತಿದ್ದೇನೆ, ನಾವು ಅನುಮತಿ ನೀಡಬೇಕು ಅನ್ನೋಷ್ಟರಲ್ಲಿ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ದಾಖಲಾಗಿದ್ದರಿಂದ ಅನುಮತಿ ಕೊಡಲು ಆಗಲಿಲ್ಲ ಎಂದರು.

ಉಚ್ಚ ನ್ಯಾಯಾಲಯದ ನಿರ್ಧಾರಕ್ಕೆ ಕಾಯಬೇಕಿತ್ತು. ನಿನ್ನೆ(ಮೊನ್ನೆ) ಹೈಕೋರ್ಟ್​ನಿಂದ ವಿಚಾರಣೆ ಆಯ್ತು. ಇವತ್ತು(ನಿನ್ನೆ) 10:30ಕ್ಕೆ ಸಾರ್ವಜನಿಕ ಹಿತಾಸಕ್ತಿ ಹಿನ್ನೆಲೆ ಆದ್ಯತೆ ನೀಡಿದ್ದಾರೆ. ಸೇಟಿಫೈಡ್ ಕಾಪಿ ನಮಗೆ ಸಿಗೋದು ತಡವಾದ್ದರಿಂದ ಅನುಮತಿ ನೀಡಲು ತಡವಾಯಿತು.‌ 19 ರಿಂದ ನಾವು ಅನುಮತಿ ನೀಡಿದ್ದೇವೆ. ಅದಕ್ಕಿಂತ ಮುಂಚೆ ಯಾವುದೇ ಪೂಜೆಗೂ ಅವಕಾಶ ಇಲ್ಲ. ಯಾವುದೇ ರೀತಿ ಒತ್ತಡ ಇಲ್ಲಾ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಸೇರಿ ಕಾನೂನು ಸುವ್ಯವಸ್ಥೆಗಾಗಿ ಷರತ್ತು ಹಾಕ್ಕಿದ್ದೇವೆ. ಷರತ್ತಿನಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಮಯವನ್ನು ಬದಲಾವಣೆ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಮುಹೂರ್ತದ ಸಮಯವನ್ನು ಪೊಲೀಸ್​ ಆಯುಕ್ತರ ಜೊತೆಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೆವೆ ಎಂದರು.

 

Please follow and like us:

tmadmin

Leave a Reply

Your email address will not be published. Required fields are marked *

Next Post

ಷರತ್ತುಗಳ ಮೇಲೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ

Sat Sep 16 , 2023
ಹುಬ್ಬಳ್ಳಿ, ಸೆಪ್ಟೆಂಬರ್‌ 16: ನಗರದ ರಾಣಿ ಚೆನ್ನಮ್ಮ ( ಈದ್ಗಾ ) ಮೈದಾನದಲ್ಲಿ ಮೂರು ದಿನಗಳವರೆಗೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾದ ಡಾ.‌ಈಶ್ವರ ಉಳ್ಳಾಗಡ್ಡಿ ತಿಳಿಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ತಡರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ತಿಂಗಳು ಆಗಸ್ಟ್ 31ರಂದು ನಡೆದ ಸಾಮಾನ್ಯ ಸಭೆ ಠರಾವಿನ ಆದೇಶ ಪ್ರಕಾರ ಈಗ ಮೂರು ದಿನಗಳವರೆಗೆ ಈದ್ಗಾ ಮೈದಾನದಲ್ಲಿ […]

Advertisement

Wordpress Social Share Plugin powered by Ultimatelysocial