2 ದಿನದಲ್ಲಿ 51 ಕೋಟಿ ರೂಪಾಯಿ ಬಾಚಿಕೊಂಡ ‘ಖುಷಿ’

 ‘ಖುಷಿ’ ಚಿತ್ರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಎರಡು ದಿನ ಉತ್ತಮವಾಗಿ ಪ್ರದರ್ಶನ ಕಂಡಿದೆ.

ನಟ ವಿಜಯ್​ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಗುತ್ತಿದೆ. ಸೆಪ್ಟೆಂಬರ್​ 1ರಂದು ಅದ್ದೂರಿಯಾಗಿ ಈ ಚಿತ್ರ ರಿಲೀಸ್​ ಆಯಿತು. ತೆಲುಗಿನ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಕಂಡಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಆಗಿದ್ದು, ಭಾರತದಲ್ಲಿ ಮಾತ್ರವಲ್ಲದೇ ವಿದೇಶದ ಅನೇಕ ಕಡೆಗಳಲ್ಲಿ ‘ಖುಷಿ’ ಸಿನಿಮಾ ಪ್ರದರ್ಶನ ಕಾಣುತ್ತಿದೆ. 2 ದಿನಕ್ಕೆ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬರೋಬ್ಬರಿ 51 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ ಎಂದು ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಹೇಳಿಕೊಂಡಿದೆ. ಈ ಸುದ್ದಿ ಕೇಳಿ ವಿಜಯ್​ ದೇವರಕೊಂಡ ಅಭಿಮಾನಿಗಳು ಖುಷಿಯಾಗಿದ್ದಾರೆ.

‘ಖುಷಿ’ ಸಿನಿಮಾಗೆ ಶಿವ ನಿರ್ವಾಣ ಅವರು ನಿರ್ದೇಶನ ಮಾಡಿದ್ದಾರೆ. ವಿಜಯ್​ ದೇವರಕೊಂಡ ಅವರಿಗೆ ಜೋಡಿಯಾಗಿ ಸಮಂತಾ ರುತ್​ ಪ್ರಭು ನಟಿಸಿದ್ದಾರೆ. ಇಬ್ಬರ ನಡುವಿನ ಕೆಮಿಸ್ಟ್ರಿ ನೋಡಿ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಒಂದು ಹೊಸ ಪ್ರೇಮಕಥೆಯನ್ನು ಈ ಸಿನಿಮಾದ ಮೂಲಕ ಹೇಳಲಾಗಿದೆ. ಫ್ಯಾಮಿಲಿ ಪ್ರೇಕ್ಷಕರಿಗೆ ‘ಖುಷಿ’ ಸಿನಿಮಾ ಹೆಚ್ಚು ಇಷ್ಟವಾಗಿದೆ. ಹಾಗಾಗಿ ಇದನ್ನು ‘ಬ್ಲಾಕ್​ ಬಸ್ಟರ್​ ಫ್ಯಾಮಿಲಿ ಎಂಟರ್​ಟೇನರ್​’ ಎಂದು ನಿರ್ಮಾಪಕರು ಹೇಳಿದ್ದಾರೆ. ಮತ್ತು ಹಾಡುಗಳು ಕೂಡ ಸಿನಿಮಾದ ಗೆಲುವಿಗೆ ಕಾರಣ ಎಂದರೆ ತಪ್ಪಾಗಲಾರದು.

 

Please follow and like us:

tmadmin

Leave a Reply

Your email address will not be published. Required fields are marked *

Next Post

ಸಬ್​ಕಾ ಸಾಥ್, ಸಬ್​ಕಾ ವಿಕಾಸ್ ಲೋಕ ಕಲ್ಯಾಣಕ್ಕೆ ಮಾರ್ಗದರ್ಶಿ ಸೂತ್ರವಾಗಬಹುದು-ಮೋದಿ

Sun Sep 3 , 2023
ಸಬ್​ಕಾ ಸಾಥ್, ಸಬ್​ಕಾ ವಿಕಾಸ್’ಲೋಕ ಕಲ್ಯಾಣಕ್ಕೆ ಮಾರ್ಗದರ್ಶಿ ಸೂತ್ರವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಸುದ್ದಿ ಸಂಸ್ಥೆ ಪಿಟಿಐಗೆ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ. 2047 ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಮತ್ತು ಭ್ರಷ್ಟಾಚಾರ, ಜಾತೀಯತೆ ಮತ್ತು ಕೋಮುವಾದ ನಮ್ಮ ಜೀವನದಲ್ಲಿ ಯಾವುದೇ ಸ್ಥಾನವನ್ನು ಹೊಂದಿರುವುದಿಲ್ಲ ಎಂದು ಪ್ರಧಾನಿ ತಿಳಿಸಿದ್ದಾರೆ. ಸೆಪ್ಟೆಂಬರ್ 9-10 ರಂದು ನವದೆಹಲಿಯಲ್ಲಿ ಜಿ-20 ರಾಷ್ಟ್ರಗಳ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ವಿಶೇಷ ಸಂದರ್ಶನ ನೀಡಿದ್ದಾರೆ. […]

Advertisement

Wordpress Social Share Plugin powered by Ultimatelysocial