200 ಕಾರ್ಮಿಕರಿಗೆ ಉದ್ಯೋಗ ಖಾತ್ರಿಯಡಿ ಕೆಲಸ

ರಾಯಚೂರು ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಸುಮಾರು 200ಜನ ಕೂಲಿಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರ್ ಹೇಳಿದ್ದಾರೆ. ಲಾಕ್ ಡೌನ್ ನಿಂದ ಕಾರ್ಮಿಕರಿಗೆ ಕೆಲಸ ಇಲ್ಲದೆ ಕಂಗಾಲಾಗಿದ್ದರು. ಪಂಚಾಯಿತಿಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಕೂಲಿಕಾರರಿಗೆ ಕೆಲಸ ನೀಡಲಾಗುತ್ತಿದೆ, ರೈತರಿಗೆ ಅನುಕೂಲವಾಗುವ ಕೃಷಿ ಹೊಂಡ,ಬದು ನಿರ್ಮಾಣ, ಕೆರೆ ನಿರ್ಮಾಣ, ಗೋಕುಂಟೆ ಸೇರಿದಂತೆ ಅನೇಕ ಕೆಲಸಗಳನ್ನು ಈಗಾಗಲೇ ನೀಡಲಾಗಿದೆ. ಇನ್ನು ಕೂಲಿಕಾರ್ಮಿಕರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಕೊಡುತ್ತೇವೆ ಎಂದು ಹೇಳಿದ್ದಾರೆ.ಈ ಸಂದರ್ಭದಲ್ಲಿ  ಮೇಟಿಗಳಾದ ಶೇಖಪ್ಪ ಸಲ್ಮಾನ್ ಶಿವಪುತ್ರ ಚನ್ನಪ್ಪಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ

Thu Jul 30 , 2020
ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಅನಗತ್ಯ. ಇದು ಕೇವಲ ಮಾಧ್ಯಮಗಳ ಚರ್ಚೆಯಷ್ಟೇ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಇನ್ನೂ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರ,ಪಕ್ಷದಲ್ಲಿ ಯಾವುದೇ ನಾಯಕರೂ ಕೂಡ ಮುಖ್ಯಮಂತ್ರಿ ಕುರ್ಚಿಗಾಗಿ ಲಾಬಿ ನಡೆಸುತ್ತಿಲ್ಲ. ಇದು ಕೇವಲ ಮಾಧ್ಯಮಗಳೂ ಊಹಾಪೋಹವಷ್ಟೇ. ಇನ್ನೂ ಇದೇ ವೇಳೆ ಕೊರೋನಾ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಅವರು, […]

Advertisement

Wordpress Social Share Plugin powered by Ultimatelysocial