224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳ ನೇಮಕ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಿರುವ ಕೇಂದ್ರ ಚುನಾವಣಾ ಆಯೋಗ, ಇದೀಗ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿದೆ.

ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ನೀಡಿರುವ ಕೇಂದ್ರ ಚುನಾವಣಾ ಆಯೋಗವು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಚುನಾವಣಾಧಿಕಾರಿಗಳನ್ನಾಗಿ ಮತ್ತು ತಹಶೀಲ್ದಾರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನಿಯೋಜನೆ ಮಾಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸಿದ್ಧತೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಜಿಲ್ಲಾಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು, ಅವರಿಗೆ ಪೂರಕವಾಗಿ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ.

ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಶೀಘ್ರದಲ್ಲಿಯೇ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ತರಬೇತಿಯನ್ನು ಸಹ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ .

Fri Feb 10 , 2023
ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಅಧಿಕಾರಿಗಳ ವರ್ಗಾವಣೆಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು 10 ತಹಶೀಲ್ದಾರ್ ಅವರನ್ನು ವರ್ಗಾವಣೆ  ಮಾಡಿ ಆದೇಶಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ತಹಶೀಲ್ದಾರ್ ಗಳನ್ನು ನಿಯೋಜಿಸಿದಂತ ಸ್ಥಳಕ್ಕೆ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದಾರೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada   Please […]

Advertisement

Wordpress Social Share Plugin powered by Ultimatelysocial