ಡಿ. 27 ರಂದು ವೇತನ ಸಹಿತ ರಜೆ ಘೋಷಣೆ: ಚುನಾವಣೆ ವ್ಯಾಪ್ತಿಯ ನೌಕರರಿಗೆ ಅನ್ವಯ

ಡಿ. 27 ರಂದು ವೇತನ ಸಹಿತ ರಜೆ ಘೋಷಣೆ: ಚುನಾವಣೆ ವ್ಯಾಪ್ತಿಯ ನೌಕರರಿಗೆ ಅನ್ವಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ/ಉಪ ಚುನಾವಣೆ ಡಿಸೆಂಬರ್ 27ರಂದು ನಡೆಯಲಿದೆ. ಮತದಾನ ನಡೆಯುವ ವ್ಯಾಪ್ತಿಯ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 27ರಂದು ವೇತನ ಸಹಿತ ರಜೆ ಘೋಷಿಸಿ ರಾಜ್ಯ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಲಾಗಿದೆ.

ಹಲವೆಡೆ ಪುರಸಭೆ, ನಗರಸಭೆ, ಗ್ರಾಮ ಪಂಚಾಯಿತಿ ಉಪ ಚುನಾವಣೆ, ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಉಪ ಚುನಾವಣೆ ಸಂಬಂಧ ಮತದಾನ ನಡೆಯುವ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ ಎಸ್ಟಾಬ್ಲಿಶ್‍ಮೆಂಟ್ ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿ.27ರ ಸೋಮವಾರ ದಂದು ವೇತನ ಸಹಿತ ರಜೆಯನ್ನು ಘೋಷಿಸಲಾಗಿದೆ.

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತಚಲಾಯಿಸಲು ಅನುಕೂಲವಾಗುವಂತೆ ಆಯಾ ಇಲಾಖೆಯ ಮುಖ್ಯಸ್ಥರು ವ್ಯವಸ್ಥೆ ಮಾಡಬೇಕು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕೆಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಲೇಜು ವಿದ್ಯಾರ್ಥಿಗಳಿಗೆ ಪಾರ್ಕ್ ಪ್ರವೇಶಕ್ಕೆ ನಿಷೇಧ

Fri Dec 24 , 2021
ಕಾಲೇಜು ವಿದ್ಯಾರ್ಥಿಗಳಿಗೆ ಪಾರ್ಕ್ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ. ತುಮಕೂರು ಮಹಾನಗರ ಪಾಲಿಕೆ ಇಂತಹದ್ದೊಂದು ವಿವಾದಿತ ನಿಯಮ ಜಾರಿಗೆ ತಂದಿದೆ. ಅಧಿಕೃತವಾಗಿ ಆದೇಶ ಹೊರಬಿದ್ದಿಲ್ಲ. ಆದರೆ ಪಾರ್ಕ್ ಗೇಟ್ ಗಳಲ್ಲಿ ಇಂತಹದ್ದೊಂದು ನಾಮಫಲಕ ಹಾಕಲಾಗಿದೆ. ಪಾಲಿಕೆ ಕಚೇರಿ ಆವರಣದಲ್ಲಿರುವ ಉದ್ಯಾನಕ್ಕೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಡೆಯೊಡ್ಡಲಾಗಿದೆ. ನಗರದ ಬಿಜಿಎಸ್ ವೃತ್ತದ ಕಡೆಯಿಂದ ಪಾಲಿಕೆ ಕಚೇರಿಗೆ ಬರುವ ಪ್ರವೇಶ ದ್ವಾರದ ಎರಡೂ ಕಡೆ ವಿದ್ಯಾರ್ಥಿಗಳ ಪ್ರವೇಶ ನಿಷೇಧಿಸಿರುವ ಸೂಚನಾ ಪತ್ರ ಅಂಟಿಸಲಾಗಿದೆ. ಅದೇ ರೀತಿ […]

Advertisement

Wordpress Social Share Plugin powered by Ultimatelysocial