ದಕ್ಷಿಣ ಭಾರತಕ್ಕೆ 3 ಹೊಸ ರೈಲುಗಳು.

 

ಬೆಂಗಳೂರು, ಜನವರಿ 24; ಭಾರತೀಯ ರೈಲ್ವೆಯ ಮೊದಲ ಸೆಮಿ-ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್. ವಿವಿಧ ರಾಜ್ಯಗಳಲ್ಲಿ ಈಗಾಗಲೇ ಈ ಮಾದರಿ ಐಷಾರಾಮಿ ರೈಲುಗಳ ಸಂಚಾರ ಆರಂಭವಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಸಹ ಶೀಘ್ರವೇ 3 ರೈಲುಗಳು ಬರಲಿವೆ.

ಪ್ರಧಾನಿ ನರೇಂದ್ರ ಮೋದಿಬೆಂಗಳೂರಿನಲ್ಲಿ ನವೆಂಬರ್ 2022ರಲ್ಲಿ ಮೈಸೂರು ಮತ್ತು ಪುರುಚ್ಚಿ ತಲೈವರ್ ಡಾ.

ಎಂಜಿಆರ್ ಚೆನ್ನೈ ಸೆಂಟ್ರಲ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು. ಈ ರೈಲು ಬೆಂಗಳೂರು ಮೂಲಕ ಸಂಚಾರ ನಡೆಸುತ್ತಿದೆ.

ಮೈಸೂರಿಗೆ ಮತ್ತೊಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗಾಗಿ ಬೇಡಿಕೆ

ಇದು ದೇಶದ 5ನೇ ಮತ್ತು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯಾಗಿತ್ತು. ಬೆಂಗಳೂರು ನಗರದಿಂದ ಉತ್ತರ ಕರ್ನಾಟಕದ ಹುಬ್ಬಳ್ಳಿಗೆ ಇದೇ ಮಾದರಿ ರೈಲು ಸಂಚಾರ ಆರಂಭಿಸಲು ಈಗಾಗಲೇ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

Vande Bharat Express : ಬೆಂಗಳೂರು ನಗರದಿಂದ ಮೂರು ಮಾರ್ಗದಲ್ಲಿ ರೈಲು ಸಂಚಾರ

ಬೆಂಗಳೂರು, ಹೈದರಾಬಾದ್, ಚೆನ್ನೈ ಸೇರಿದಂತೆ ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ, ಐಟಿ ಉದ್ಯಮದ ನೆಲೆ ಹೊಂದಿರುವ ಅನೇಕ ನಗರಗಳಿವೆ. ಇಂತಹ ನಗರಗಳಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲು ಭಾರತೀಯ ರೈಲ್ವೆ ಚಿಂತನೆ ನಡೆಸಿದೆ.

ಬೆಂಗಳೂರು ನಗರದಿಂದ ಮೂರು ಮಾರ್ಗದಲ್ಲಿ ರೈಲು ಸಂಚಾರ

ಭಾರತೀಯ ರೈಲ್ವೆಯಿಂದ ಯೋಜನೆ

ಭಾರತೀಯ ರೈಲ್ವೆ ಅಧಿಕಾರಿಗಳ ಪ್ರಕಾರ ದಕ್ಷಿಣ ಭಾರತದ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸಲು ಇನ್ನೂ 3 ವಂದೇ ಭಾರತ್ ರೈಲುಗಳನ್ನು ಘೋಷಣೆ ಮಾಡಲಾಗುತ್ತದೆ. ಈ ಕುರಿತು ಚಿಂತನೆ ನಡೆದಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದ ಮಂಡನೆ ಮಾಡುವ ಬಜೆಟ್‌ನಲ್ಲಿ ಹೊಸ ರೈಲುಗಳು ಘೋಷಣೆಯಾಗುವ ಸಾಧ್ಯತೆ ಇದೆ.

ಮೈಸೂರು-ಚೆನ್ನೈ ರೈಲು ಸೇವೆ ಹೊರತುಪಡಿಸಿ, ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಸಿಕಂದರಾಬಾದ್-ವಿಶಾಖಪಟ್ಟಣ ನಡುವಿನ ರೈಲು ಸೇವೆಗೆ ಚಾಲನೆ ನೀಡಿದ್ದಾರೆ. ಈ ರೈಲು ಸೇವೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ.

ಸದ್ಯ ಇರುವ ಮಾಹಿತಿ ಪ್ರಕಾರ ಭಾರತೀಯ ರೈಲ್ವೆ ಯಾವ-ಯಾವ ಮಾರ್ಗದಲ್ಲಿ ರೈಲುಗಳ ಸಂಚಾರ ನಡೆಸಬಹುದು ಎಂದು ಯೋಜನೆ ರೂಪಿಸುತ್ತಿದೆ. ಬೆಂಗಳೂರು-ಹುಬ್ಬಳ್ಳಿ-ಧಾರವಾಡ ತನಕ ವಂದೇ ಭಾರತ್ ರೈಲು ಓಡಿಸುತ್ತೇವೆ ಎಂದು ರೈಲ್ವೆ ಸಚಿವರು ಈಗಾಗಲೇ ಘೋಷಣೆ ಮಾಡಿದ್ದಾರೆ.

ಉಳಿದಂತೆ ತೆಲಂಗಾಣ ರಾಜ್ಯದ ಕಾಚಿಗುಡಾ-ಬೆಂಗಳೂರು, ತೆಲಂಗಾಣದ ಸಿಕಂದರಾಬಾದ್-ತಿರುಪತಿ, ಸಿಕಂದರಾಬಾದ್-ಪುಣೆ ಮಾರ್ಗದಲ್ಲಿ ಹೊಸ ವಂದೇ ಭಾರತ್ ರೈಲುಗಳನ್ನು ಓಡಿಸುವ ಸಾಧ್ಯತೆ ಇದೆ. ಮಾರ್ಗಗಳ ಅಂತಿಮ ಪಟ್ಟಿ ಶೀಘ್ರವೇ ಪ್ರಕಟವಾಗುವ ನಿರೀಕ್ಷೆ ಇದೆ.

ಚುನಾವಣೆಯ ಮೇಲೆ ಕಣ್ಣು

2023ರಲ್ಲಿ ದಕ್ಷಿಣ ಭಾರತದಲ್ಲಿ ನಡೆಯುವ ಚುನಾವಣೆಗಳ ಮೇಲೆ ಕೇಂದ್ರ ಸರ್ಕಾರ ಗಮನವಿಟ್ಟಿದೆ. ಆದ್ದರಿಂದ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗುತ್ತದೆ. ಅದರಲ್ಲಿ ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಹ ಸೇರಿವೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ನಡೆಯಲಿದೆ. ತೆಲಂಗಾಣ ರಾಜ್ಯದಲ್ಲಿಯೂ ಸಹ ಇದೇ ವರ್ಷ ಚುನಾವಣೆ ಇದೆ.

ಆಂಧ್ರ ಪ್ರದೇಶ ರಾಜ್ಯದಲ್ಲಿಯೂ ಮುಂದಿನ ವರ್ಷ ಚುನಾವಣೆ ಇದೆ. ಅಲ್ಲದೇ ಲೋಕಸಭೆ ಚುನಾವಣೆ 2024ರಲ್ಲಿ ನಡೆಯಲಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ತಂತ್ರ ರೂಪಿಸುತ್ತಿದೆ. ಅದರ ಭಾಗವಾಗಿಯೇ ರೈಲು ಮಾರ್ಗ ಘೋಷಣೆಯಾಗಲಿದೆ ಎಂಬ ವಿಶ್ಲೇಷಣೆಯೂ ಇದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೊರ್ಬಿ ಸೇತುವೆ ದುರಂತ:

Tue Jan 24 , 2023
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಅಕ್ಟೋಬರ್ 30, 2022 ರಂದು ಮೊರ್ಬಿಯಲ್ಲಿ ಸೇತುವೆ ಕುಸಿದು 134 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒರೆವಾ ಗ್ರೂಪ್‌ನ ಜಯಸುಖ್ ಪಟೇಲ್ ಅವರನ್ನು ಬಂಧಿಸಲು ಗುಜರಾತ್ ನ್ಯಾಯಾಲಯವು ವಾರಂಟ್ ಹೊರಡಿಸಿದೆ. ಅಜಂತಾ ಮ್ಯಾನುಫ್ಯಾಕ್ಚರಿಂಗ್ ಲಿಮಿಟೆಡ್ (ಒರೆವಾ ಗ್ರೂಪ್) ಮೊರ್ಬಿಯಲ್ಲಿನ ಮಚ್ಚು ನದಿಯಲ್ಲಿ ಬ್ರಿಟಿಷರ ಕಾಲದ ಸೇತುವೆಯನ್ನು ನವೀಕರಿಸುವ, ದುರಸ್ತಿ ಮಾಡುವ ಮತ್ತು ನಿರ್ವಹಿಸುವ ಗುತ್ತಿಗೆಯನ್ನು ಪಡೆದುಕೊಂಡಿತ್ತು. ಮೊರ್ಬಿಯ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್, ಎಂಜೆ ಖಾನ್ ಅವರು ಪಟೇಲ್ […]

Advertisement

Wordpress Social Share Plugin powered by Ultimatelysocial