300 ಕೆ.ಜಿ ಗೂ ಅಧಿಕ ಗಾಂಜಾ ವಶ

ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಫೈರಿಂಗ್ , ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ರೌಡಿ ನಿಗ್ರಹ ದಳ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಸ್ವಾಮಿ ಸಮರ್ಥ ದೇವಾಲಯದ ಬಳಿ ಪೊಲೀಸರು ಫೈರಿಂಗ್ ನಡೆಸಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಭೀಮು (34) ಬಲಗಾಲಿಗೆ ಗುಂಡು ತಗುಲಿದೆ. ರೌಡಿ ನಿಗ್ರಹ ದಳದ ಪಿಎಸ್ಐ ವಾಹೀದ್ ಕೋತ್ವಾಲ್ ಫೈರಿಂಗ್ ಮಾಡಿದ್ದಾರೆ. ಆರೋಪಿಯು ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ನಿವಾಸಿ ಎಂದು ಹೇಳಲಾಗುತ್ತಿದೆ. ಬಾಬು ಹಾಗೂ ಇಬ್ಬರು ಹೆಣ್ಣು ಮಕ್ಕಳು ಸೇರಿ ಒಟ್ಟು ನಾಲ್ಕು ಜನ ಎರಡು ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲು ಮುಂದಾದ ಪೋಲಿಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮ ರಕ್ಷಣೆಗೆ ಪಿಎಸ್ಐ ಕೊತ್ವಾಲ್ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆಂದು ತಿಳಿದು ಬಂದಿದೆ. ಸದ್ಯ ಆರೋಪಿಯಿಂದ 300 ಕೆಜಿಗೂ ಅಧಿಕ ಗಾಂಜಾ ವಶಪಡಿಸಿಕೊಂಡಿರುವ ಪೊಲೀಸರು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಪತ್ನಿಯ ಪ್ರಿಯಕರನ ಹಲ್ಲೆ ಮಾಡಿದ್ದ ವೆಂಕಟೇಶ್

Please follow and like us:

Leave a Reply

Your email address will not be published. Required fields are marked *

Next Post

ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ

Mon Feb 22 , 2021
ಅಕಾಲಿಕವಾಗಿ ಸುರಿದ ಮಳೆಯ ಅಬ್ಬರಕ್ಕೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಜನರು ಕಂಗಾಲಾಗಿದ್ದಾರೆ.ಸತತ ಒಂದು ಗಂಟೆ ಕಾಲ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ನೀರು ಬಟ್ಟೆ ಅಂಗಡಿಗೆ ನುಗ್ಗಿದ ಪರಿಣಾಮ ಲಕ್ಷಾಂತರ ರೂ.ಮೌಲ್ಯದ ಬಟ್ಟೆ ನೀರು ಪಾಲಾಗಿದೆ. ಇನ್ನು ಕಾಮಗಾರಿ ಪ್ರಗತಿಯಲ್ಲಿದ್ದು,ಮಳೆ ಸುರಿದ ಕಾರಣ ಚರಂಡಿ ನೀರು ಅಂಗಡಿಗೆ ನುಗ್ಗಿದೆ.ಅಂಗಡಿಯೊಳಗೆ 2-3 ಅಡಿ ಎತ್ತರಕ್ಕೆ ನೀರು ನಿಂತಿದೆ. ಇದನ್ನೂ ಓದಿ:300 ಕೆ.ಜಿ ಗೂ ಅಧಿಕ ಗಾಂಜಾ ವಶ […]

Advertisement

Wordpress Social Share Plugin powered by Ultimatelysocial