ಹಾಸನ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದವನ್ನು ರಾಜಕೀಯಗೊಳಿಸಿದ್ದೇ ಬಿಜೆಪಿಯ ಅಂಗ ಸಂಸ್ಥೆಗಳು. ಈ ವಿವಾದ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಿಸಿದರು.

ನಗರದ ನಂದಗೋಕುಲ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಡಿಜಿಟಲ್ ಸದಸ್ಯತ್ವ ಕಾರ್ಯಾಗಾರದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ ಇಲ್ಲ.

ಇದೆಲ್ಲವೂ ಸರ್ಕಾರದ ಪ್ರಾಯೋಜಿತ ಎಂಬುದನ್ನು ಸಚಿವರೇ ಒಪ್ಪಿಕೊಂಡಿದ್ದಾರೆ ಎಂದು ದೂರಿದರು.

ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರ ನ್ಯಾಯಾಲಯದಲ್ಲಿದೆ. ಮಕ್ಕಳಿಗೆ ಶಿಕ್ಷಣ ನೀಡುವುದು ಹಾಗೂ ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಿರುವುದೂ ಸರ್ಕಾರದ ಕರ್ತವ್ಯ. ಆದರೆ, ಸರ್ಕಾರ ವಿವಾದಕ್ಕೆ ಪ್ರೇರಪಣೆ ನೀಡಿ ಅಶಾಂತಿ ಸೃಷ್ಟಿಸಿದೆ. ಸಂವಿಧಾನ ಉಳಿಸಬೇಕಿರುವುದು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜನಪ್ರತಿನಿಧಿಗಳ ಜವಾಬ್ದಾರಿ ಎಂದರು.

‘ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸಬೇಕು’ ಎಂಬ ಸಚಿವ ಕೆ.ಎಸ್‌ ಈಶ್ವರಪ್ಪ ಅವರ ಹೇಳಿಕೆಗೆ ಕಿಡಿಕಾರಿದ ಸುರೇಶ್, ಈ ರೀತಿ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಮತ್ತು ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಮುಖ್ಯ ಸಂಯೋಜಕರಾದ ರಘುನಂದನ್, ರಾಮಣ್ಣ, ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್, ಮುಖಂಡರಾದ ಎಚ್.ಕೆ. ಮಹೇಶ್, ದೇವರಾಜೇಗೌಡ, ಬಾಗೂರು ಮಂಜೇಗೌಡ, ಬನವಾಸೆ ರಂಗಸ್ವಾಮಿ, ಸಣ್ಣಸ್ವಾಮಿ, ಎಚ್.ಕೆ. ಜವರೇಗೌಡ, ತಾರಾ ಚಂದನ್, ಎಚ್.ಎಸ್. ಆನಂದ್ ಕುಮಾರ್, ರಂಗಸ್ವಾಮಿ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ರಂಜಿತ್ ಗೊರೂರು, ವಿನೋದ್ ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ನಿರುದ್ಯೋಗ ಹೆಚ್ಚುತ್ತಿದೆ, ಆದರೆ ಮೋದಿ ಸರ್ಕಾರ 1 ನೇ ಪ್ರಧಾನಿ ನೆಹರು ಅವರನ್ನು ದೂಷಿಸುವುದರಲ್ಲಿ ನಿರತವಾಗಿದೆ': ಮನಮೋಹನ್ ಸಿಂಗ್

Thu Feb 17 , 2022
ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಟುವಾದ ವಾಗ್ದಾಳಿಯಲ್ಲಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಫೆಬ್ರವರಿ 17, ಗುರುವಾರ, ದೇಶದ ಆರ್ಥಿಕತೆಯು ಕೆಟ್ಟ ಸ್ಥಿತಿಯಲ್ಲಿದ್ದರೆ, ಬಿಜೆಪಿ ನೇತೃತ್ವದ ಕೇಂದ್ರವು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುವುದರಲ್ಲಿ ನಿರತವಾಗಿದೆ ಎಂದು ಹೇಳಿದರು. ಅದರ ಸಮಸ್ಯೆಗಳು. ಕಾಂಗ್ರೆಸ್ ಪಕ್ಷದ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, 89 ವರ್ಷದ ಮಾಜಿ ಪ್ರಧಾನಿ ದೇಶದ ಆರ್ಥಿಕತೆಯ ಕಳಪೆ ಸ್ಥಿತಿಯ ಬಗ್ಗೆ ಕೇಂದ್ರ […]

Advertisement

Wordpress Social Share Plugin powered by Ultimatelysocial