443 ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರೆಸಿದೆ.. ರಾಜ್ಯದಲ್ಲಿ  ಇಂದು ಹೊಸದಾಗಿ 16 ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ರಾಜ್ಯದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 443 ಕ್ಕೆ ಏರಿಕೆಯಾಗಿದೆ. ಈ ಕುರಿತು ಇಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.. ಹೊಸದಾಗಿ  16  ಸೋಂಕಿತರ ಪೈಕಿ ಬೆಂಗಳೂರಿನ 9 ಮಂದಿ. ವಿಜಯಪುರ 2, ಮಂಡ್ಯದಲ್ಲಿ 2, ಧಾರವಾಡದಲ್ಲಿ 2, ದಕ್ಷಿಣ ಕನ್ನಡದಲ್ಲಿ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯಿಂದ ತಿಳಿದು ಬಂದಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ಮೈಸೂರಿನಲ್ಲಿ ಲಾಕ್ ಡೌನ್ ಸಡಿಲಿಕೆ ಇಲ್ಲ.

Thu Apr 23 , 2020
ಕೊರೊನಾ ಸೋಂಕು ಪೀಡಿತರ ಸಂಖ್ಯೆ ಮೈಸೂರಿನಲ್ಲಿ ಹೆಚ್ಚಿರುವ ಹಿನ್ನೆಲೆ ರೆಡ್ ಝೋನ್ ಇದೆ , ಜಿಲ್ಲೆಯಲ್ಲಿ ಯಾವುದೇ ರೀತಿ ಸಡಿಲಿಕೆ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೆಡಿಕಲ್ ಎಮರ್ಜೆನ್ಸಿಯಂತಹ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗಿದೆ. ಕೃಷಿ ಚಟುವಟಿಕೆಗೆ ಈಗಾಗಲೇ ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ-ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದೆ, ಪರಿಸ್ಥಿತಿ ನೋಡಿ ಮುಂದಿನ ಕ್ರಮ […]

Advertisement

Wordpress Social Share Plugin powered by Ultimatelysocial