ನಾಲ್ಕು ದಶಕದ ರಾಜಕಾರಣಿಗೆ ಉತ್ತಮ ಶಾಸಕ ಪ್ರಶಸ್ತಿ

ನಾಲ್ಕು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ಸೇವೆ ಸಲ್ಲಿಸುತ್ತಿರುವ, ವಿವಿಧ ಇಲಾಖೆಗಳ ಸಚಿವರಾಗಿ ಕಾರ್ಯನಿರ್ವಹಿಸಿರುವ ಆರ್.‌ ವಿ. ದೇಶಪಾಂಡೆ ಅವರಿಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರದಾನ ಮಾಡಿದೆ.ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಶಸ್ತಿಯನ್ನು ಘೋಷಣೆ ಮಾಡಿದರು. ಸಿಎಂ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಪ್ರಶಸ್ತಿ ಪ್ರದಾನ ಮಾಡಿದರು.ನಂತರ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕರ್ನಾಟಕದಲ್ಲಿ ಕೈಗಾರೀಕರಣ ಹಾಗೂ ಕೈಗಾರಿಕಾ ನೀತಿ ರೂಪಿಸುವುದರಲ್ಲಿ ಮಹತ್ವದ ಪಾತ್ರವನ್ನು ಆರ್‌. ವಿ. ದೇಶಪಾಂಡೆ ವಹಿಸಿದ್ದಾರೆ. ಪ್ರಗತಿಪರವಾದ ಚಿಂತನೆಯುಳ್ಳವರು. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಆರ್ಥಿಕತೆ ಬದಲಾವಣೆ, ಉದಾರೀಕರಣ ಹಾಗೂ ಜಾಗತೀಕರಣದ ಲಾಭವನ್ನು ರಾಜ್ಯಕ್ಕೆ ಲಭಿಸುವಂತೆ ಪ್ರಾಮಾಣಿಕ ಪರಿಶ್ರಮ ವಹಿಸಿದರು. ರಾಜ್ಯದಲ್ಲಿ ಟೊಯೊಟಾ ಕಾರ್ಖಾನೆಗೆ ರಿಯಾಯ್ತಿಗಳನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯದಲ್ಲಿ ದೊಡ್ಡ ಬದಲಾವಣೆಗಳನ್ನು ತರಲು ಶ್ರಮಿಸಿದ್ದಾರೆ ಎಂದರು.ಹಿರಿಯರು ಹಾಗೂ ಮಾರ್ಗದರ್ಶಕರೂ ಆಗಿರುವಂತಹ ಆರ್.ವಿ. ದೇಶಪಾಂಡೆಯವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಸಂದಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ. ಸರ್ವಸಮ್ಮತದ ಆಯ್ಕೆಯಲ್ಲಿ ವಿಧಾನಮಂಡಲದ ವಿಧಾನಸಭೆಯ ನಡೆವಳಿಕೆಗಳನ್ನು ಎತ್ತರದ ಮಟ್ಟದಲ್ಲಿ ನಿಭಾಯಿಸುವುದನ್ನು ತಮ್ಮ ನಡತೆಯಿಂದ ಕಳೆದ 8 ಬಾರಿ ಆಯ್ಕೆಯಲ್ಲಿ ತೋರಿಸಿಕೊಟ್ಟಿದ್ದಾರೆ. ಅತ್ಯುತ್ತಮ ಆಯ್ಕೆ ಮಾಡಿರುವುದಕ್ಕೆ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಆರ್.ವಿ. ದೇಶಪಾಂಡೆಯವರೊಂದಿಗೆ ಹಳೆಯ ನೆನಪುಗಳಿವೆ. ಸರಳ, ಸಜ್ಜನ ವ್ಯಕ್ತಿತ್ವ, ರಾಜ್ಯ ಹಾಗೂ ದೇಶದ ಹಿತಕ್ಕೆ ಚಿಂತನೆ ಮಾಡುವವರು. ರಾಜ್ಯದ ರಾಜಕಾರಣದಲ್ಲಿ ಗುರುತಿಸಲ್ಪಟ್ಟವರು. 1980ರಲ್ಲಿ ಎಪಿಎಂಸಿ ನಿರ್ದೇಶಕರಾಗಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಬಳಿಗೆ ಒಂದು ತಂಡವನ್ನು ಕರೆತಂದಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಒಟ್ಟು 22 ಜನರಿಗೆ ಪಾಸಿಟಿವ್.

Fri Dec 30 , 2022
ರಾಜಧಾನಿ ಬೆಂಗಳೂರಿಗೆ ವಿದೇಶಿ ಪ್ರಯಾಣಿಕರೇ ಕಂಟಕ.. ಹೈರಿಸ್ಕ್ ದೇಶಗಳಿಂದ ಬಂದ ಮೂವರಿಗೆ ಕೊರೊನಾ ಪಾಸಿಟಿವ್ ಹೈರಿಸ್ಕ್ ರಾಷ್ಟ್ರಗಳಿಂದ ಬರುತ್ತಿರುವ ಪ್ರಯಾಣಿಕರಲ್ಲಿ ಹೆಚ್ಚಾಯ್ತು ಕೊರೊನಾ ಆಂಕರ್: ರಾಜಧಾನಿ ಬೆಂಗಳೂರಿಗೆ ಹೊಸ ರೂಪಾಂತರ ಕೊರೊನಾ ತಳಿ ದಿನದಿಂದ ದಿನಕ್ಕೆ ಭಯ ಹುಟ್ಟಿಸುತ್ತಿದೆ. ಅದರಲ್ಲೂ ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬರುತ್ತಿರುವ ಪ್ರಯಾಣಿಕರ ಆಗಮನ ಕಂಕವಾಗುವ ಸಾಧ್ಯತೆ ಇದೆ. ದಿನದಿಂದ ದಿನಕ್ಕೆ ರಾಜ್ಯಕ್ಕೆ ಬರುತ್ತಿರುವ ವಿದೇಶಿ ಪ್ರಯಾಣಿಕರಲ್ಲಿ ಪಾಸಿಟಿವ್ ಬರುತ್ತಿದ್ದು, ನೆನ್ನೆ ಮತ್ತೆ 3 ಪ್ರಯಾಣೀಕರಿಗೆ […]

Advertisement

Wordpress Social Share Plugin powered by Ultimatelysocial