50ಕ್ಕೂ ಹೆಚ್ಚು ಮಂದಿ ಮದುವೆಯಲ್ಲಿ ಭಾಗಿ

ಕೊರೊನಾವೈರಸ್ ಭೀತಿ ನಡುವೆಯೇ ಮದುವೆ ಸಮಾರಂಭಕ್ಕೆ 50ಕ್ಕಿಂತ ಹೆಚ್ಚು ಮಂದಿ ಅತಿಥಿಗಳನ್ನು ಆಹ್ವಾನಿಸಿದ್ದರು. ಈ ಕುರಿತಂತೆ ಕುಟುಂಬಕ್ಕೆ ಜಿಲ್ಲಾಡಳಿತ 6 ಲಕ್ಷಕ್ಕಿಂತಲೂ ಹೆಚ್ಚು ದಂಡ ವಿಧಿಸಿದ ಘಟನೆ ರಾಜಾಸ್ಥಾನದಲ್ಲಿ ನಡೆದಿದೆ. ಹೌದು ರಾಜಸ್ಥಾನದ ಭಿಲ್ವಾರ ಜಿಲ್ಲೆಯ ಭಡಡಾ ಮೊಹಲ್ಲಾ ನಿವಾಸಿ ಘೀಸುಲಾಲ್ ರಾಠಿ ಎಂಬವರ ಮಗನ ಮದುವೆ ಜೂನ್ 13ರಂದು ನಡೆದಿತ್ತು. ಕೊರೊನಾ ಸೋಂಕು ಹರಡುತ್ತಿರುವ ಇಂತಹ ಸಮಯದಲ್ಲಿ ಮದುವೆ ಕಾರ್ಯಕ್ರಮಗಳಲ್ಲಿ 50ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ ಎಂದು ಸರ್ಕಾರ ನಿರ್ಬಂಧ ಹಾಕಿದೆ. ಆದರೆ ಈ ಮದುವೆಯಲ್ಲಿ 50ಕ್ಕಿಂತಲೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಆದ್ದರಿಂದ ಮದುವೆ ಸಮಾರಂಭ ಮುಗಿದ ನಂತರ ಅತಿಥಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಯಿತು. ಬಳಿಕ ಇದರಲ್ಲಿ 15 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಭಟ್ ಹೇಳಿದ್ದಾರೆ. ಹೀಗಾಗಿ ರಾಠಿ ಕುಟುಂಬದ ವಿರುದ್ಧ ಜೂನ್ 22ಕ್ಕೆ ಪ್ರಕರಣ ದಾಖಲಾಗಿದೆ.

 

 

 

 

Please follow and like us:

Leave a Reply

Your email address will not be published. Required fields are marked *

Next Post

ವಿಶೇಷ ಸೌಲಭ್ಯ ನೀಡ್ತಿದೆ ಯೆಸ್ ಬ್ಯಾಂಕ್

Sun Jun 28 , 2020
ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಖಾಸಗಿ ವಲಯದ ಯೆಸ್ ಬ್ಯಾಂಕ್ ಡಿಜಿಟಲ್ ಉಳಿತಾಯ ಖಾತೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಗ್ರಾಹಕರು ಬ್ಯಾಂಕ್ ಗೆ ಹೋಗಬೇಕಾಗಿಲ್ಲ. ಈ ಖಾತೆಯನ್ನು ಇ-ಕೆವೈಸಿ ಮತ್ತು ವಿಡಿಯೋ ಪರಿಶೀಲನೆಯ ಮೂಲಕ ತೆರೆಯಬಹುದು ಎಂದು ತಿಳಿಸಿದೆ. ಹಾಗೆಯೇ ಡಿಜಿಟಲ್ ಉಳಿತಾಯ ಖಾತೆಯು ವರ್ಚುವಲ್ ಡೆಬಿಟ್ ಕಾರ್ಡ್‌ನೊಂದಿಗೆ ಬರುತ್ತದೆ. ಇದರ ಸಹಾಯದಿಂದ ಗ್ರಾಹಕರಿಗೆ 100 ಕ್ಕೂ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು […]

Advertisement

Wordpress Social Share Plugin powered by Ultimatelysocial