576ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಮತ್ತೆ 11 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 576ಕ್ಕೇರಿಕೆಯಾಗಿದೆ. ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ ಬುಲೆಟಿನ್ ನಿಂದ ತಿಳಿದಿದೆ. ಹೊಸದಾಗಿ ಸೋಂಕಿತರ ಪೈಕಿ ಮಂಡ್ಯ ಜಿಲ್ಲೆಯಲ್ಲಿ ಎಂಟು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ 409 ಸಂಖ್ಯೆ 67 ವರ್ಷದ ಮಹಿಳೆ ನಿನ್ನೆ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಾಗೂ ಸಿಪಿಒಡಿ ಮತ್ತು ಮಧುಮೇಹದಿಂದ ಬಳಲುತ್ತಿದ್ದ ಈ ಮಹಿಳೆ ಏ.18ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ನಿಧನರಾಗಿದ್ದಾರೆ. ಈ ಮೂಲಕ ಕೊರೊನಾದಲ್ಲಿ ಸಾವಿನ ಸಂಖ್ಯೆ 22ಕ್ಕೇರಿಕೆಯಾಗಿದೆ

Please follow and like us:

Leave a Reply

Your email address will not be published. Required fields are marked *

Next Post

ಮೇ ಅಂತ್ಯಕ್ಕೆ ರಾಜ್ಯದಲ್ಲಿ 60 ಕೋವಿಡ್‌ ಪರೀಕ್ಷಾ ಲ್ಯಾಬ್‌ ಗಳು

Fri May 1 , 2020
ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಅಗತ್ಯವಿರುವ ಲ್ಯಾಬ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದೆ ಎಂದು  ಸಚಿವ ಸುಧಾಕರ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮೇ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ 60 ಕೋವಿಡ್‌ ಪರೀಕ್ಷಾ ಲ್ಯಾಬ್‌ಗಳನ್ನು ಸ್ಥಾಪನೆ ಮಾಡಲು ಸರ್ಕಾರ ಗುರಿ ಹೊಂದಿದೆ.  ರಾಜ್ಯದಲ್ಲಿ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಗದಗ,ವಿಜಯಪುರ, ತುಮಕೂರು ಜಿಲ್ಲೆಗಳಲ್ಲೂ ಈಗ ಕೋವಿಡ್19 ಲ್ಯಾಬ್ ಕಾರ್ಯಾರಂಭ […]

Advertisement

Wordpress Social Share Plugin powered by Ultimatelysocial