66 ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಟ್ಟದ ಮೇಲಿಂದ ಕಣಿವೆಗೆ ಉರುಳಿದ್ದು

66 ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಟ್ಟದ ಮೇಲಿಂದ ಕಣಿವೆಗೆ ಉರುಳಿದ್ದು, ಈ ಅಪಘಾತದಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ 20 ಮಂದಿ ಗಾಯಗೊಂಡಿದ್ದಾರೆಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಅಮೆರಿಕದ ಪಶ್ಚಿಮ ಪನಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಕೊಲಂಬಿಯಾದಿಂದ ಪನಾಮಕ್ಕೆ ಡೇರಿಯನ್ ಲೈನ್ ಅನ್ನು ದಾಟಿ ವಲಸಿಗರನ್ನು ಗೌಲಾಕಾ ನಿರಾಶ್ರಿತರ ಶಿಬಿರಕ್ಕೆ ಸಾಗಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸರ್ಕಾರದ ಪರವಾಗಿ, ಪನಾಮಾ ಅಧ್ಯಕ್ಷ ಲೊರೆಂಜೊ ಕಾರ್ಟಿಜೊ ಅವರು ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ವೇಳೆ ಚಾಲಕ ಬಸ್ ಹೆದ್ದಾರಿಗೆ ಹಿಂತಿರುಗಿಸಲು ಪ್ರಯತ್ನಿಸಿದನು, ಆದರೆ ಇನ್ನೊಂದು ಬಸ್ ಅದಕ್ಕೆ ಡಿಕ್ಕಿ ಹೊಡೆದಿದ್ದರಿಂದ ಬಸ್ ಕಂದಕಕ್ಕೆ ಬಿದ್ದಿದೆ ಎಂದು ಲಾರೆಂಟಿಯೊ ಕಾರ್ಟಿಜೊ ಹೇಳಿದರು. ಕಳೆದ ಹತ್ತು ವರ್ಷಗಳಲ್ಲಿ ಪನಾಮದಲ್ಲಿ ವಲಸಿಗರು ಕಂಡ ಅತ್ಯಂತ ಭೀಕರ ಅಪಘಾತ ಇದಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಬಸ್‌ನಲ್ಲಿ 66 ಜನರು ಪ್ರಯಾಣಿಸುತ್ತಿದ್ದು, ಗಾಯಗೊಂಡವರಲ್ಲಿ ಐದಕ್ಕೂ ಹೆಚ್ಚು ಮಕ್ಕಳಿರುವುದಾಗಿ ಪನಾಮದ ಆರೋಗ್ಯ ಸಚಿವಾಲಯ ತಿಳಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಡಬಲ್ ಇಂಜಿನ್ ಸರ್ಕಾರ ಅಂತಾರೆ. ಡಬಲ್ ಇಂಜಿನ್ ಸರ್ಕಾರ ಸಮಸ್ಯೆ ಏನಂದರೆ, ಜನರಿಗೆ ಕಷ್ಟ ಬರುವಾಗ ಇಂಜಿನ್ ಆಫ್ ಆಗುತ್ತೆ

Thu Feb 16 , 2023
    ಬೆಂಗಳೂರು,ಫೆಬ್ರವರಿ15: ಡಬಲ್ ಇಂಜಿನ್ ಸರ್ಕಾರ ಅಂತಾರೆ. ಡಬಲ್ ಇಂಜಿನ್ ಸರ್ಕಾರ ಸಮಸ್ಯೆ ಏನಂದರೆ, ಜನರಿಗೆ ಕಷ್ಟ ಬರುವಾಗ ಇಂಜಿನ್ ಆಫ್ ಆಗುತ್ತೆ ಯಾರದೂ ಇಂಜಿನ್ ವರ್ಕ್ ಆಗಲ್ಲ ಎಂದು ಶಾಸಕ ಯು ಟಿ ಖಾದರ್ ಲೇವಡಿ ಮಾಡಿದರು. ಬುಧವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಕೇಂದ್ರ ಬಿಜೆಪಿ ಸರ್ಕಾರ ಸರ್ವ ಜನಾಂಗಕ್ಕೆ ಒಂದು ಕಾರ್ಯಕ್ರಮ ಸಮರ್ಪಕವಾಗಿ ಕೊಟ್ಟಿಲ್ಲ. ನಮ್ಮ ಸರ್ಕಾರ ಹಲವಾರು […]

Advertisement

Wordpress Social Share Plugin powered by Ultimatelysocial