7ನೇ ವೇತನ ಆಯೋಗ ಜಾರಿ ಘೋಷಣೆಯಾಗದ ಕಾರಣ : ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಸಭೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ನಲ್ಲಿ ಏಳನೇ ವೇತನ ಆಯೋಗ ಜಾರಿ ಕುರಿತಂತೆ ಯಾವುದೇ ಘೋಷಣೆ ಮಾಡದಿರುವುದು ಹಾಗೂ ಪಿಂಚಣಿ ಯೋಜನೆ ಕುರಿತು ನಿರ್ಧಾರ ಹೊರಬೀಳದಿರುವುದು ಸರ್ಕಾರಿ ನೌಕರರಲ್ಲಿ ನಿರಾಸೆ ಮೂಡಿಸಿದೆ.

ಚುನಾವಣಾ ವರ್ಷವಾಗಿರುವ ಕಾರಣ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬಹುದು ಎಂಬ ಆಶಾ ಭಾವನೆ ಇತ್ತಾದರೂ ಬಜೆಟ್ ಮಂಡನೆ ಬಳಿಕ ಇದು ಹುಸಿಯಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಇಂದು ತುರ್ತು ಸಭೆ ಕರೆದಿದೆ.

ಈ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ರೂಪುರೇಷೆ ನಿರ್ಧರಿಸಲಾಗುತ್ತದೆ ಎಂದು ಹೇಳಲಾಗಿದ್ದು, ಜೊತೆಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಹೋರಾಟ ನಡೆಸುತ್ತಿರುವ ಎನ್‌ಪಿಎಸ್ ನೌಕರರ ಜೊತೆ ಕೈಜೋಡಿಸುವ ಸಾಧ್ಯತೆ ಇದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದು ಟರ್ಕಿ, ಸಿರಿಯಾದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ

Tue Feb 21 , 2023
ಟರ್ಕಿ: ದೇಶದಲ್ಲಿ ಸಂಭವಿಸಿದಂತ ಭೂಕಂಪನದಿಂದಾಗಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಅನೇಕರು ತಮ್ಮವರನ್ನು ಕಳೆದುಕೊಂಡು ಗೋಳಿಡುತ್ತಿದ್ದಾರೆ. ಈ ಘಟನೆ ಹಸಿರಾಗಿರೋ ಮುನ್ನವೇ ಇಂದು ಟರ್ಕಿ, ಸಿರಿಯಾದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಕುರಿತಂತೆ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದ್ದು, ಇಂದು ಟರ್ಕಿ, ಸಿರಿಯಾದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿ ಮಾಡಿದೆ. ಟರ್ಕಿಯ ಹಟೇ ಪ್ರಾಂತ್ಯದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮಧ್ಯ […]

Advertisement

Wordpress Social Share Plugin powered by Ultimatelysocial