ಬೆಂಗಳೂರು : ಸಂಕ್ರಾಂತಿ ವೇಳೆಗೆ ಬಿಡುಗಡೆಯಾಗಬೇಕಿದ್ದ ಕಾಂಗ್ರೆಸ್ ಪಕ್ಷದ ವಿಧಾನಸಭೆ ಚುನಾವಣೆ ಅಭ್ಯರ್ಥಿ ಪಟ್ಟಿ ವಿಳಂಬವಾಗಿದ್ದು, ಇನ್ನು ಕೆಲ ದಿನಗಳಲ್ಲಿಯೇ ಪ್ರಕಟವಾಗಲಿದೆ ಎಂಬ ಮಾತು ಕೇಳಿಬರುತ್ತಿದೆ. ರಾಹುಲ್ ಗಾಂಧಿ ಕೈಗೊಂಡಿದ್ದ ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಅವರನ್ನು ಭೇಟಿಯಾಗಿ ಹೈಕಮಾಂಡ್ ನಾಯಕರ ಜತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ.
ಇದರಿಂದ ರಾಜ್ಯ ಕಾಂಗ್ರೆಸ್ ನಾಯಕರು ಮೊದಲ ಹಂತದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದ 130 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ತಮ್ಮಲ್ಲೇ ಇಟ್ಟುಕೊಂಡಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ವಿಳಂಬ : ಇನ್ನೊಂದೆಡೆ ಬಸ್ ಯಾತ್ರೆ, ಮುಂದಿನವಾರ ಆರಂಭವಾಗುವ ವಿಧಾನ ಮಂಡಲ ಜಂಟಿ ಅಧಿವೇಶನ, ನಂತರ ಬಜೆಟ್, ಅದರ ಮೇಲಿನ ಚರ್ಚೆ ಇತ್ಯಾದಿಗಳು ಇರುವ ಹಿನ್ನೆಲೆ ಫೆಬ್ರವರಿ ತಿಂಗಳ ಮೂರನೇ ವಾರದ ಕೊನೆಯವರೆಗೂ ರಾಜ್ಯ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಲಿದ್ದಾರೆ. ಈ ಸಂದರ್ಭದಲ್ಲಿ ಪಟ್ಟಿ ಹಿಡಿದು ಹೈಕಮಾಂಡ್ ನಾಯಕರ ಭೇಟಿಗೆ ತೆರಳುವ ಸಾಧ್ಯತೆ ಬಹಳಷ್ಟು ಕಡಿಮೆ ಎನ್ನಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada