ಈ ತಿಂಗಳ ಆರಂಭದಲ್ಲಿ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಹಿನ್ನೆಲೆಯಲ್ಲಿ ಟರ್ಕಿಯ ಹಟಾಯ್ನಲ್ಲಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿರುವ ಭಾರತೀಯ ಸೇನೆಯ ಮಹಿಳಾ ಅಧಿಕಾರಿಯನ್ನು ಟರ್ಕಿಶ್ ಮಹಿಳೆಯೊಬ್ಬರು ಅಪ್ಪಿಕೊಂಡಿರುವ ಫೋಟೋ ವೈರಲ್ ಆಗಿದೆ.
ಸ್ವತಂತ್ರ ಪತ್ರಕರ್ತ ಝಹಕ್ ತನ್ವಿರ್ ಇದನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ನಂತರ ಫೋಟೋ ವೈರಲ್ ಆಗಿದೆ. ಇದೇ ಫೋಟೋವನ್ನು ಈ ಹಿಂದೆ ಭಾರತೀಯ ಸೇನೆಯ ಟ್ವಿಟರ್ ಹ್ಯಾಂಡಲ್ನಲ್ಲಿ ‘ವಿ ಕೇರ್’ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿತ್ತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada