ಮಂಗಳೂರು, ಮಾ.1: ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದು (ಮಾ.1) ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಬಗ್ಗೆ ಪ್ರಕಟನೆ ಹೊರಡಿಸಿರುವ ವಿವಿಯ ಕುಲಸಚಿವ(ಪರೀಕ್ಷಾಂಗ) ಮಾ.1ರಂದು ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮುಂದೂಡಲಾದ ವೇಳಾಪಟ್ಟಿಯನ್ನು ಶೀಘ್ರ ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada