ಕೊರೋನಾ ಹೆಚ್ಚುತ್ತಿರುವ ಸಂದರ್ಭವೇ ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ವ್ಯಾಕ್ಸಿನ್ ಪಡೆದಿದ್ದಾರೆ. ಕೊರೋನಾ ವ್ಯಾಕ್ಸಿನ್ನ ಫಸ್ಟ್ ಡೋಸ್ ಪಡೆದ ನಟ ಇದನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.
ನಾನು ಕೊರೋನಾ ವ್ಯಾಕ್ಸಿನ್ ಮೊದಲ ಡೋಸ್ ಪಡೆದಿದ್ದೇನೆ. ನೀವೂ 45 ವರ್ಷ ಮೇಲ್ಪಟ್ಟವರಾಗಿದ್ದರೆ ವ್ಯಾಕ್ಸಿನೇಷನ್ ಪಡ್ಕೊಳ್ಳಿ ಎಂದು ಪೋಟೋ ಜೊತೆ ಕೇಳಿಕೊಂಡಿದ್ದಾರೆ ನಟ.
ಯುವರತ್ನ ಸಿನಿಮಾ ರಿಲೀಸ್ ಸಂದರ್ಭವೇ ಕೊರೋನಾ ಕೂಡಾ ಹೆಚ್ಚಾಗಿದ್ದು, ಸಿನಿಮಾ ಪ್ರದರ್ಶನಕ್ಕೂ ತೊಂದರೆಯಾಗಿತ್ತು. ನಟ ಸಿಎಂ ಅವರನ್ನು ಭೇಟಿಯಾಗಿ ಕಾಲಾವಕಾಶ ನೀಡುವಂತೆ ಕೇಳಿಕೊಂಡಿದ್ದರು
ಸದ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಭಾರತದಲ್ಲಿ ಒಂದು ದಿನದ ಕೊರೋನಾ ಸಂಖ್ಯೆ 1 ಲಕ್ಷ ದಾಟಿದೆ. ಹಾಗೆಯೇ ಸಾವಿನ ಸಂಖ್ಯೆಯೂ ಹೆಚ್ಚಾಗಿರುವುದು ಆತಂಕ ಹೆಚ್ಚಿಸಿದೆ.