ಕೊರೋನಾ ನಿಯಂತ್ರಣಕ್ಕಾಗಿ ಹೇರಲಾಗಿರುವ ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕತೆಗೆ ತೀವ್ರ ಪೆಟ್ಟಾಗಿದೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಗಂಭೀರವಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮುಂದಿನ ದಿನಗಳಲ್ಲಿ ಹಸಿವು-ನಿರುದ್ಯೋಗದಂತಹ ಗಂಭೀರ ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ರಾಜ್ಯ ಸರ್ಕಾರಗಳು ಕೂಡಲೇ ಈ ಸಮಸ್ಯೆಗಳ ನಿರ್ವಹಣೆಗೆ ಮಾರ್ಗೋಪಾಯ ಹುಡುಕಬೇಕು . ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ‘ಕಾಸ್ಟ್ ಆಫ್ ಲಿವಿಂಗ್’ ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ ಎಂದು ಹೇಳಿದರು.