ನವದೆಹಲಿ: ಕಾವೇರಿ ವಿವಾದದ ಕುರಿತು ದೆಹಲಿಯಲ್ಲಿ ನಡೆದ ರಾಜ್ಯ ಜನಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕರ್ನಾಟಕದ ಹಿತಕಾಪಾಡುವಲ್ಲಿ ನಮ್ಮ ಬದ್ಧತೆ ಇದೆ. ಮೊದಲು ನೀರು ಹರಿಸಿ ಈಗ ಸಭೆ ಮಾಡುವುದು.ಮೈತ್ರಿ ಗಟ್ಟಿಗೊಳಿಸಲು ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು ಎಂದು ಹೇಳಿದ್ದೇನೆ. ನೀವು ಮೊದಲು ನೀರು ಹರಿಸುವಾಗ ಯಾರನ್ನು ಕೇಳಿದ್ರಿ ? ಆಗ ನಿಮಗೆ ಸಂಸದರ ನೆನಪು ಆಗಲಿಲ್ವಾ ? ಈ ವಿಷಯದಲ್ಲಿ ರಾಜಕೀಯ ಮಾಡಬೇಡಿ ಅಂತ ಸರ್ಕಾರಕ್ಕೆ ಹೇಳಿದ್ದೇನೆ ಎಂದು ಹೇಳಿದರು.
Prahlad Joshi: ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಸರ್ಕಾರಕ್ಕೆ ಜೋಶಿ ತಾಕೀತು
Please follow and like us: