ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರ ನೆರವಿಗೆ ಧಾವಿಸದೇ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಅಸಂಘಟಿತ ಕಾರ್ಮಿಕ ವಲಯದವರ ವಿಚಾರವಾಗಿ ಈವರೆಗೂ ಒಂದೇ ಒಂದು ಮಾತನ್ನೂ ಆಡಿಲ್ಲ. ಲಾಕ್ಡೌನ್ನಿಂದ ವಾಹನ ಚಾಲಕರು, ಕ್ಷೌರಿಕರು, ಬಟ್ಟೆ ಹೊಲಿಯುವವರು, ಆಟೋ ಚಾಲಕರು, ಹೊಟೇಲ್ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ವೃತ್ತಿಪರ ಕಾರ್ಮಿಕರಿಗೆ ಆದಾಯ ಇಲ್ಲದಂತಾಗಿದೆ. ಹೀಗಾಗಿ ಇವರಿಗೆ ತಿಂಗಳಿಗೆ 10 ಸಾವಿರದಂತೆ ಪ್ರೋತ್ಸಾಹ ಧನ ನೀಡಬೇಕು. ಇದರ ಬಗ್ಗೆ ಈಗಾಗಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಅಸಂಘಟಿತ ಕಾರ್ಮಿಕರ ನೆರವಿಗೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ.
Please follow and like us: