ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಇಂದು ಮತ್ತೆ 22 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದಿದೆ. ಹೊಸದಾಗಿ ಸೋಂಕಿತರ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1, ವಿಜಯಪುರ 2, ಬೆಳಗಾವಿ 14, ತುಮಕೂರು 1, ಬೆಂಗಳೂರು ನಗರ 3 ಹಾಗೂ ದಾವಣಗೆರೆಯಲ್ಲಿ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
557ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ
Please follow and like us: