ನವದೆಹಲಿ : ಸರ್ಕಾರಿ ತೈಲ ಕಂಪನಿಗಳು ಇಂದು ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್ 4 ರಂದು ಇಂಧನ ದರ ಸ್ಥಿರವಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್ ಬೆಲೆ ಲೀಟರ್ಗೆ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ.
ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada