ಅನೇಕ ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡಿಕೊಳ್ಳಲು ಬಗರುಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಭೂಸುಧಾರಣಾ ಕಾಯ್ದೆ ಅರ್ಜಿ ಸಲ್ಲಿಸಿದ ಅನೇಕ ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ. ಅಂತಹ ರೈತರಿಗೆ ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ ನೀಡಲಾಗುವುದು. ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗುತ್ತದೆ. ಫಾರಂ ನಂಬರ್ 50, 53 ರ ಅಡಿ ಅರ್ಜಿ ಸಲ್ಲಿಸುವ ಅವಧಿ ಮುಕ್ತಾಯವಾಗಿದೆ. ರೈತರಿಂದ ಅವಧಿ ವಿಸ್ತರಣೆಗೆ ಮನವಿ ಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ
ಬಗರುಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ
Please follow and like us: