ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡ ಹೊಳೆಯಲ್ಲಿ ನಡೆದಿದೆ.ಉಡುಪಿ ಮೂಲದ ಕುಟುಂಬವೊಂದು ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆರೆಯುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಹಾಲದ ಮರ ಬಿದ್ದು ಈ ದುರಂತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಈ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: