ವೈರಸ್ ಸಾಂಕ್ರಾಮಿಕ ಸೋಂಕು ತಪಾಸಣೆಯನ್ನು ಕರ್ನಾಟಕದಲ್ಲಿ ಆರಂಭದಿಂದಲೂ ಶರವೇಗದಲ್ಲಿ ನಡೆಸಲಾಗುತ್ತಿದ್ದು. ರಾಜ್ಯದಲ್ಲಿ ಈವರೆಗೂ 5.73 ಕೋಟಿ ಜನರಿಗೆ ಕೊವಿಡ್-19 ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ ..
ಕರ್ನಾಟಕದಲ್ಲಿ ಕೊವಿಡ್-19 ಹೂಸ ರೂಪಾಂತರಿ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚುತ್ತಿರುವುದರ ಮಧ್ಯೆ ಒಂದೇ ದಿನ 2 ಲಕ್ಷ ಜನರಿಗೆ ಸೋಂಕು ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 69,952 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,33,308 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 2,03,260 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 1,08,28,304 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ
ಭಾರತದಲ್ಲಿ ಒಂದೇ ದಿನ 15,29,948 ಮಂದಿಗೆ ಕೊರೊನಾವೈರಸ್ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಇದುವರೆಗೂ 68,84,70,959 ಜನರಿಗೆ ಸೋಂಕು ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯು ತಿಳಿಸಿದರೆ. ಈ ಪೈಕಿ ಕರ್ನಾಟಕದಲ್ಲಿ ಇದುವರೆಗೂ 1,08,28,304 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. 4,65,01,611 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 5,73,29, 915 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ .
ಕರ್ನಾಟಕದಲ್ಲಿ ಕೊವಿಡ್-19 ಸೋಂಕಿತರ ಪ್ರಕರಣಗಳು
ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ 8400ದ ಗಡಿ ದಾಟಿದ್ದು, ಪಾಸಿಟಿವಿಟಿ ದರ ಶೇ.4.15ರಷ್ಟಾಗಿದೆ. ಕಳೆದ ಒಂದೇ ದಿನದಲ್ಲಿ 8449 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 505 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24ಗಂಟೆಗಳಲ್ಲಿ 4 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 38362 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3031052ಕ್ಕೆ ಏರಿಕೆಯಾಗಿದೆ. ಒಟ್ಟು 2962548 ಸೋಂಕಿತರು ಗುಣಮುಖರಾಗಿದ್ದು. 30113 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada