ಬೇಕಾಗುವ ಪದಾರ್ಥಗಳು…
ಕೋಳಿ ಮೊಟ್ಟೆ- 2
ಹಸಿಮೆಣಸಿನ ಕಾಯಿ – 2
ಈರುಳ್ಳಿ- 1
ಕೊತ್ತಂಬರಿ ಸೊಪ್ಪು- ಸ್ವಲ್ಪ
ಕಾಳುಮೆಣಸಿನ ಪುಡಿ – ಸ್ವಲ್ಪ
ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು
ಉಪ್ಪು-ರುಚಿಗೆ ತಕ್ಕಷ್ಟು
ಮಾಡುವ ವಿಧಾನ…
ಮೊದಲಿಗೆ ಈರುಳ್ಳಿ, ಕೊತ್ತಂಬರಿ ಸೊಪ್ಪು ಹಾಗೂ ಹಸಿಮೆಣಸಿನ ಕಾಯಿಯನ್ನು ಸಣ್ಣಗೆ ಕತ್ತರಿಸಿಟ್ಟುಕೊಳ್ಳಬೇಕು.
ನಂತರ ಒಂದು ಬಾಣಲೆಗೆ 2-3 ಚಮಚ ಎಣ್ಣೆಯನ್ನು ಹಾಕಿ, ಈರುಳ್ಳಿ ಹಾಗೂ ಹಸಿಮೆಣಸಿನ ಕಾಯಿಯನ್ನು ಕೆಂಪಗೆ ಹುರಿದುಕೊಳ್ಳಬೇಕು. ನಂತರ ಇದಕ್ಕೆ ಕೊತ್ತಂಬರಿ ಸೊಪ್ಪು, ಉಪ್ಪು, ಕಾಳು ಮೆಣಸಿನ ಪುಡಿನ್ನು ಸೇರಿಸಿ ತಣ್ಣಗಾಗಲು ಬಿಡಿ.
ತಣ್ಣಗಾದ ಬಳಿಕ ಮೊಟ್ಟೆಯನ್ನು ಒಡೆದು ಇದಕ್ಕೆ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
ಒಲೆಯ ಮೇಲೆ ತವಾ ಇಟ್ಟು ಒಂದು ಚಮಚ ಎಣ್ಣೆಯನ್ನು ಹಾಕಿ ಮಸಾಲೆ ಮಿಶ್ರಿತ ಮೊಟ್ಟೆಯನ್ನು ಹಾಕಿ ಎರಡೂ ಬದಿಯಲ್ಲೂ ಕೆಂಪಗೆ ಸುಟ್ಟರೆ ರುಚಿಕರವಾದ ಮೊಟ್ಟೆ ದೋಸೆ ಸವಿಯಲು ಸಿದ್ಧ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada