ಯೋಗರಾಜ್ ಭಟ್ ನಿರ್ದೇಶನದಲ್ಲಿ ಗಣೇಶ್ ಮತ್ತು ದಿಗಂತ್ ನಟನೆಯ ರೊಮ್ಯಾಂಟಿಕ್ ಸಿನಿಮಾ ಗಾಳಿಪಟ-2 ಭಾರೀ ನಿರೀಕ್ಷೆ ಹುಟ್ಟು ಹಾಕಿದೆ. 2008 ರಲ್ಲಿ ಈ ಮೂವರ ಕಾಂಬಿನೇಷನ್ ನ ಗಾಳಿಪಟ ಸಿನಿಮಾ ಸೂಪರ್ ಹಿಟ್ ಆಗಿತ್ತು.
ಸಿನಿಮಾ ಬಗ್ಗೆಗಿನ ಇತ್ತೀಚೀನ ಸುದ್ದಿ ಏನೆಂದರೇ , ಗಾಳಿಪಟ-2 ಚಿತ್ರದ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕನ್ನು ಜೀ ಕನ್ನಡ ಮತ್ತು ಜೀ5 ಭಾರೀ ಮೊತ್ತಕ್ಕೆ ಖರೀದಿಸಿವೆ.
ಈ ವಿಷಯವನ್ನು ಗಾಳಿಪಟ-2 ನಿರ್ಮಾಪಕ ರಮೇಶ್ ರೆಡ್ಡಿ ಅವರೇ ಖಚಿತ ಪಡಿಸಿದ್ದಾರೆ. ಆನಂದ್ ಆಡಿಯೊಗೆ ಮಾರಾಟವಾದ ಸಂಗೀತದ ಹಕ್ಕುಗಳು ಸೇರಿದಂತೆ ಚಿತ್ರವು 8 ಕೋಟಿ ರೂಪಾಯಿಗೂ ಹೆಚ್ಚು ಪ್ರೀ-ರಿಲೀಸ್ ವಹಿವಾಟು ಮಾಡಿದೆ ಎಂದು ಹೇಳಲಾಗುತ್ತದೆ.
ಗಣೇಶ್ ಮತ್ತು ದಿಗಂತ್ ಜೊತೆಗೆ ಹಿರಿಯ ನಟ ಅನಂತ್ ನಾಗ್, ನಿರ್ದೇಶಕ-ನಟ ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್ ಮತ್ತು ಶರ್ಮಿಳಾ ಮಾಂಡ್ರೆ ಪ್ರಮುಖ ಪಾತ್ರಗಳಲ್ಲಿದ್ದಾರೆ.
ಅರ್ಜುನ್ ಜನ್ಯ ಅವರ ಸಂಗೀತ ಮತ್ತು ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದೆ, ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಗಾಳಿಪಟ 2 ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಅಧಿಕೃತ ದಿನಾಂಕ ಹೊರ ಬೀಳಲಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada