ಬೀದರ್: ಮುಂದಿನ ಸೂಚನೆ ನೀಡೋವರೆಗೂ ಶಾಲಾ ಕಾಲೇಜಿಗೆ ಯಾವುದೇ ಧಾರ್ಮಿಕ ಬಟ್ಟೆಯನ್ನು ಧರಿಸಿ ಬರಬಾರದೆಂದು ಹೈಕೋರ್ಟ್ ಸೂಚನೆ ನೀಡಿದೆ.ಸೂಚನೆಯಿದ್ದರು, ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷೆಗೆ ಬಂದ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಬೀಮ್ಸ್ ಮೆಡಿಕಲ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಪರೀಕ್ಷೆ ಬರೆಯಲು ಬಂದಿದ್ದರು. ಆದ್ರೆ ಈ ವೇಳೆ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ನಿರಾಕರಿಸಿದ್ದಾರೆ. ಆದ್ರೆ ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಈಗ ಆ ವಿಡಿಯೋ ವೈರಲ್ ಆಗುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada