ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಈಗಾಗಲೇ 59 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಘಟನೆ ನಡೆದ ಮೂರು -ನಾಲ್ಕು ಗಂಟೆಯೊಳೆಗೆ ಎಲ್ಲ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು ಈಗಾಗಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಬಿಬಿಎಂಪಿ ಸಿಬ್ಬಂದಿಯ ಮೇಲೆ ಕೆಲವರು ಹಲ್ಲೆ ಮಾಡಿದ್ದು, ವಿಚಾರಣೆ ನಡೆಸಲಾಗಿದೆ. ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಿಎಂ ಸೂಚನೆ ಹಿನ್ನಲೆಯಲ್ಲಿ ಇನ್ನೂ ಹೆಚ್ಚಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.
ಪಾದರಾಯನಪುರದಲ್ಲಿ 59 ಮಂದಿಯನ್ನು ಬಂಧಿಸಿದ್ದೇವೆ : ಬೊಮ್ಮಾಯಿ
Please follow and like us: