ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು;

ಬೆಂಗಳೂರು: ‘ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಹಾಗೊಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ಸದನದ ಒಳಗೆ ಮತ್ತು ಹೊರಗೆ ನಮ್ಮ ಪ್ರತಿಭಟನೆ ಮುಂದುವರಿಸುತ್ತೇವೆ’ ಎಂದು ಕೆ‍ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ‘ಕೂ’ದಲ್ಲಿ ಈಶ್ವರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಡಿಕೆಶಿ, ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳುವುದು ದೇಶದ್ರೋಹವಲ್ಲದೆ ಮತ್ತಿನ್ನೇನು ಎಂದು ಪ್ರಶ್ನಿಸಿದ್ದಾರೆ.

‘ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ದೇಶದ ಹಿತಾಸಕ್ತಿ ಹಾಗೂ ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡುತ್ತಿದ್ದೇವೆ. ಭಾರತದ ಧ್ವಜ ಹಾಗೂ ರಾಷ್ಟ್ರಗೀತೆಯನ್ನು ಗೌರವಿಸುವುದು ಮೂಲಭೂತ ಹಕ್ಕು ಎಂದು ಸಂವಿಧಾನದ ವಿಧಿ 51ಎ ಹೇಳುತ್ತದೆ. ಜನಪ್ರತಿನಿಧಿಗಳಾಗಿ, ಭಾರತೀಯರಾಗಿ ನಾವು ರಾಷ್ಟ್ರಧ್ವಜಕ್ಕೆ ಅಪಮಾನ ಎಸಗುವ ಯಾವ ತಪ್ಪನ್ನೂ ಮಾಡಿಲ್ಲ’ ಎಂದು ಅವರು ಉಲ್ಲೇಖಿಸಿದ್ದಾರೆ.

ಸಚಿವರಾಗಿ ಪ್ರಮಾಣ ಸ್ವೀಕರಿಸುವಾಗ ಸಂವಿಧಾನದ ಆಶಯಗಳಿಗೆ, ದೇಶದ ಹಿತಾಸಕ್ತಿಗೆ ಗೌರವ ತೋರಿ ನಡೆಯುವುದಾಗಿ ಪ್ರಮಾಣ ಮಾಡುತ್ತಾರೆ. ಹಾಗೆ ಪ್ರಮಾಣ ಮಾಡಿದ ಸಚಿವ ಈಶ್ವರಪ್ಪ ಅವರು ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳುವುದು ದೇಶದ್ರೋಹವಲ್ಲದೆ ಮತ್ತಿನ್ನೇನು? ಇಂಥ ಹೇಳಿಕೆ ನೀಡಿದ ಸಚಿವರ ವಿರುದ್ಧ ರಾಜ್ಯಪಾಲರು ಕ್ರಮ ಕೈಗೊಳ್ಳಬೇಕಿತ್ತು. ಮುಖ್ಯಮಂತ್ರಿಗಳು ಅವರ ರಾಜೀನಾಮೆ ಪಡೆಯಬೇಕಿತ್ತು. ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಕಾಂಗ್ರೆಸ್‌ ಪಕ್ಷದ ನಾಯಕರ ಸಣ್ಣ ಹೇಳಿಕೆಗಳನ್ನೂ ಗಂಭೀರವಾಗಿ ಪರಿಗಣಿಸಿ ಜೈಲಿಗಟ್ಟಿದ ಬಿಜೆಪಿ ಸರ್ಕಾರಕ್ಕೆ ಈಶ್ವರಪ್ಪ ಅವರ ಹೇಳಿಕೆಯಲ್ಲಿ ತಪ್ಪು ಕಾಣಿಸಲಿಲ್ಲವೇ ಎಂದು ಶಿವಕುಮಾರ್ ಪ್ರಶ್ನಿಸಿದ್ದಾರೆ.

ಸಚಿವರೇ ತಾವು ಕೇಸರಿ ಧ್ವಜ, ಶಾಲನ್ನು ಸೂರತ್‌ನಿಂದ ತರಿಸಿ ಹಂಚಿದ್ದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಸಚಿವರು ಇಂದೂ ಕೂಡ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಕನಿಷ್ಠ ಪಕ್ಷ ಈಗಲಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳದೆ ಸರ್ಕಾರ ಮೌನವಾಗಿರುವುದು ಏಕೆ? ವಿಧಾನಸಭಾ ಕಲಾಪಗಳು ಆರಂಭವಾಗುವ ಮುನ್ನ ಮುಖ್ಯಮಂತ್ರಿಗಳು ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಹಾಗೊಂದುವೇಳೆ ಕ್ರಮ ಕೈಗೊಳ್ಳದಿದ್ದರೆ ಸದನದ ಒಳಗೆ ಮತ್ತು ಹೊರಗೆ ನಮ್ಮ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ‘ಕೂ’ ಮಾಡಿದ್ದಾರೆ.

Koo App ಸಚಿವರಾಗಿ ಪ್ರಮಾಣ ಸ್ವೀಕರಿಸುವಾಗ ಸಂವಿಧಾನದ ಆಶಯಗಳಿಗೆ, ದೇಶದ ಹಿತಾಸಕ್ತಿಗೆ ಗೌರವ ತೋರಿ ನಡೆಯುವುದಾಗಿ ಪ್ರಮಾಣ ಮಾಡುತ್ತಾರೆ. ಹಾಗೆ ಪ್ರಮಾಣ ಮಾಡಿದ ಸಚಿವ ಈಶ್ವರಪ್ಪ ಅವರು ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳುವುದು ದೇಶದ್ರೋಹವಲ್ಲದೆ ಮತ್ತಿನ್ನೇನು? 2/5- D K Shivakumar (@dkshivakumar_official) 18 Feb 2022

Koo App ಇಂಥ ಹೇಳಿಕೆ ನೀಡಿದ ಸಚಿವರ ವಿರುದ್ಧ ಗವರ್ನರ್‌ ಅವರು ಕ್ರಮ ಕೈಗೊಳ್ಳಬೇಕಿತ್ತು. ಮುಖ್ಯಮಂತ್ರಿಗಳು ರಾಜೀನಾಮೆ ಪಡೆಯಬೇಕಿತ್ತು. ಪೊಲೀಸರು ಸೊಮೊಟೊ ಪ್ರಕರಣ ದಾಖಲಿಸಬೇಕಿತ್ತು. ಕಾಂಗ್ರೆಸ್‌ ಪಕ್ಷದ ನಾಯಕರ ಸಣ್ಣ ಹೇಳಿಕೆಗಳನ್ನೂ ಗಂಭೀರವಾಗಿ ಪರಿಗಣಿಸಿ ಜೈಲಿಗಟ್ಟಿದ ಬಿಜೆಪಿ ಸರ್ಕಾರಕ್ಕೆ ಈಶ್ವರಪ್ಪ ಅವರ ಹೇಳಿಕೆಯಲ್ಲಿ ತಪ್ಪು ಕಾಣಿಸಲಿಲ್ಲವೇ? 3/5- D K Shivakumar (@dkshivakumar_official) 18 Feb 2022

Koo App ಸಚಿವರೇ ತಾವು ಕೇಸರಿ ಧ್ವಜ, ಶಾಲನ್ನು ಸೂರತ್‌ನಿಂದ ತರಿಸಿ ಹಂಚಿದ್ದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಸಚಿವರು ಇಂದೂ ಕೂಡ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಕನಿಷ್ಠ ಪಕ್ಷ ಈಗಲಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳದೆ ಸರ್ಕಾರ ಮೌನವಾಗಿರುವುದು ಏಕೆ? 4/5- D K Shivakumar (@dkshivakumar_official) 18 Feb 2022

Koo App ನಾಳೆ ಬೆಳಗ್ಗೆ ವಿಧಾನಸಭಾ ಕಲಾಪಗಳು ಆರಂಭವಾಗುವ ಮುನ್ನ ಮುಖ್ಯಮಂತ್ರಿಗಳು ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಹಾಗೊಂದುವೇಳೆ ಕ್ರಮ ಕೈಗೊಳ್ಳದಿದ್ದರೆ ಸದನದ ಒಳಗೆ ಮತ್ತು ಹೊರಗೆ ನಮ್ಮ ಪ್ರತಿಭಟನೆ ಮುಂದುವರಿಸುತ್ತೇವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

Please follow and like us:

Leave a Reply

Your email address will not be published. Required fields are marked *

Next Post

‘ಸಿರಿಗನ್ನಡಂ ಗೆಲ್ಗೆ’ ಎಂಬುದು ಸಾಮಾನ್ಯವಾಗಿ ಕನ್ನಡ ಪ್ರೇಮಿಗಳು ಪ್ರೀತಿಯಿಂದ ಉಸುರುವ ಮಂತ್ರ.

Fri Feb 18 , 2022
ಈ ಮಂತ್ರವನ್ನು ಮೊದಲು ಉದ್ಘೋಷಿಸಿದವರು ಕನ್ನಡವನ್ನು ಬೆಳೆಸಿದ ಮಹಾಪುರುಷರಲ್ಲಿ ಪ್ರಮುಖರಾದ ರಾಮಚಂದ್ರ ಹಣಮಂತರಾಯ ದೇಶಪಾಂಡೆ ಅವರು. ಕನ್ನಡದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವಹಿಸಿದ, ಕನ್ನಡ ಸಾಹಿತ್ಯ ಪರಿಷತ್ತಿಗಿಂತಲೂ 28 ವರ್ಷ ಹಿಂದೆಯೇ ತಲೆ ಎತ್ತಿದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಂಸ್ಥಾಪನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದವರಾಗಿಯೂ ಅವರು ಪ್ರಸಿದ್ಧರು.ರಾ. ಹ. ದೇಶಪಾಂಡೆ ಅವರು 1861ರ ಮಾರ್ಚ್ 20ರಂದು ಧಾರವಾಡದ ಸಮೀಪದ ನರೇಂದ್ರ ಎಂಬ ಗ್ರಾಮದಲ್ಲಿ ಜನಿಸಿದರು. ಪ್ರಾರಂಭದಿನದಲ್ಲೂ ಓದಿನಲ್ಲಿ ಪ್ರತಿಭಾವಂತರಾಗಿದ್ದ ರಾ.ಹ. […]

Advertisement

Wordpress Social Share Plugin powered by Ultimatelysocial