ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಮತ್ತಿಬ್ಬರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಡವಾಗಿದೆ. ಓರ್ವ ಹೆಡ್ ಕಾನ್ಸ್ ಸ್ಟೇಬಲ್ ಹಾಗೂ ಓರ್ವ ಎಎಸ್ ಐಗೆ ಕೊರೊನಾ ಸೊಂಕು ತಗುಲಿದೆ.ಈ ಮೊದಲು ಠಾಣೆಯಲ್ಲಿ ಇಬ್ಬರಿಗೆ ಕೊರೊನಾ ಸೊಂಕು ಬಂದಿತ್ತು. ಅಲ್ಲದೆ ಸೊಂಕಿತ ಪೇದೆಗಳ ಸಂಪರ್ಕದಲ್ಲಿದ್ದು, ಕ್ವಾರೆಂಟೈನ್ ಮಾಡಲಾಗಿತ್ತು. ಆದ್ರೆ ಇದೀಗ ಅವರಿಗೂ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈಗಾಗಲೇ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯನ್ನ ಸೀಲ್ ಡೌನ್ ಮಾಡಲಾಗಿತ್ತು. ಸದ್ಯ ಈ ಇಬ್ಬರ ಟ್ರಾವೆಲ್ ಹಿಸ್ಟರಿಯನ್ನ ಅಧಿಕಾರಿಗಳು ಹುಡುಕುತಿದ್ದಾರೆ. ಅಲ್ಲದೇ ಐಪಿಎಸ್ ಅಧಿಕಾರಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಕೆಎಸ್ಆರ್ಪಿ ಕಮಾಂಡೆಂಟ್ ಆಗಿ ಕಾರ್ಯನಿರ್ವಹಿಸುತಿದ್ದ , ಸೋಂಕಿತ ಸಿಬ್ಬಂದಿಯ ಸಂಪರ್ಕ ದಿಂದ ಸೋಂಕು ಬಂದಿರುವ ಶಂಕೆ ವ್ಯಕ್ತವಾಗಿದೆ. ಮೂರು ದಿನಗಳ ಹಿಂದೆ ಐಪಿಎಸ್ ಅಧಿಕಾರಿ ಕೊರೊನಾ ಟೆಸ್ಟ್ ಮಾಡಿಸಿದ್ದರು.ಇದೀಗ ವರದಿಯಲ್ಲಿ ಪಾಸಿಟಿವ್ ಬಂದಿದೆ.
ಸಿಟಿ ಮಾರ್ಕೆಟ್ ಪೊಲೀಸ್ರಿಗೆ ಕೊರೊನಾ
Please follow and like us: