ದೇಶಾದ್ಯಂತ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದೇಶದಲ್ಲಿ ಒಂದು ದಿನದಲ್ಲಿ 24,248 ಮಂದಿಗೆ ಮಾರಕ ಸೋಂಕು ಪತ್ತೆಯಾಗಿದೆ, ಕಳೆದ 24 ಗಂಟೆಯಲ್ಲಿ 425 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಮಹಾಮಾರಿ ಸೋಂಕಿಗೆ 19,693 ಸಾವನ್ನಪ್ಪಿದ್ದಾರೆ. ಇದೀಗ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,97,413ಕ್ಕೆ ಏರಿಕೆಯಾಗಿದೆ. ಈ ಪೈಕಿ 4,24,433 ಮಂದಿ ಸೋಂಕಿತರು ಸಂಪೂರ್ಣವಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 2,53,287 ಮಂದಿ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ನೀಡಿದೆ.
ದೇಶಾದ್ಯಂತ ಕೊರೊನಾ ಅಟ್ಟಹಾಸ
Please follow and like us: