ನವದೆಹಲಿ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ನೋಡಲು ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ. ಏಪ್ರಿಲ್ 14ರಂದು ಚಿತ್ರ ವಿಶ್ವದಾದ್ಯಂತ ತೆರೆಗೆ ಅಪ್ಪಳಿಸಲಿದೆ. ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಯಲ್ಲೂ ಕೆಜಿಎಫ್ ಚಾಪ್ಟರ್ 2 ದಾಖಲೆ ಬರೆದಿದ್ದು, ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಚಿತ್ರವನ್ನು ಹಿಂದಿಕ್ಕಿದೆ.
ಇನ್ನು ಚಿತ್ರ ಹೇಗಿರಲಿದೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇರಲಿದೆ. ಅದಕ್ಕೆ ಉತ್ತರ ಇಲ್ಲಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮೂಲದ ಸ್ವಘೋಷಿತ ಸಿನಿಮಾ ವಿಮರ್ಶಕ ಉಮೇರ್ ಸಂಧು ಕೆಜಿಎಫ್ ಚಾಪ್ಟರ್ 2 ಚಿತ್ರದ ಮೊದಲ ವಿಮರ್ಶೆಯನ್ನು ನೀಡಿದ್ದಾರೆ. ಚಿತ್ರವನ್ನು ಮೆಚ್ಚಿಕೊಂಡಿರುವ ಉಮೇರ್, ವಿಶ್ವದರ್ಜೆಯ ಸಿನಿಮಾ ಎಂದು ಹಾಡಿ ಹೊಗಳಿದ್ದಾರೆ.
ಕೆಜಿಎಫ್ ಚಾಪ್ಟರ್ 2 ಒಂದು ಹೈ ಆಕ್ಟೇನ್ ಮನರಂಜನಾ ಮಸಾಲ ಸಿನಿಮಾ ಆಗಿದೆ. ನಿಮ್ಮ ಭರವಸೆಯನ್ನು ಖಂಡಿತ ಉಳಿಸಿಕೊಳ್ಳುತ್ತದೆ. ಈ ಚಿತ್ರ ನಿಮ್ಮನ್ನು ಸಂಪೂರ್ಣ ಮನರಂಜಿಸಲಿದೆ. ಬೆರಗುಗೊಳಿಸುವ ಸಾಹಸ, ಅಚ್ಚರಿಯ ಸ್ಥಳಗಳು ಮತ್ತು ಚಿತ್ರವನ್ನು ಸೊಗಸಾಗಿ ಪ್ರಸ್ತುತ ಪಡಿಸಿದ್ದಾರೆ. ಬಾಕ್ಸ್ಆಫೀಸ್ನಲ್ಲಿ ಈ ಸಿನಿಮಾಗೆ ವೀಕ್ಷಕರು ಅದ್ಧೂರಿ ಸ್ವಾಗತವನ್ನು ನೀಡಲಿದ್ದಾರೆ. ಯಶ್ ಅವರ ನಟನೆ ಅದ್ಭುತವಾಗಿದ್ದು, ಈ ಚಿತ್ರ ಬ್ಲಾಕ್ಬ್ಲಸ್ಟರ್ ಆಗಲಿದೆ ಎಂದು ಹೇಳಿದ್ದಾರೆ.
ಕೆಜಿಎಫ್ ಚಾಪ್ಟರ್ 2 ಕನ್ನಡ, ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಏಪ್ರಿಲ್ 14 ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಕೆಜಿಎಫ್: ಚಾಪ್ಟರ್ 2′ ಅನ್ನು ಪ್ರಶಾಂತ್ ನೀಲ್ ಬರೆದು ನಿರ್ದೇಶಿಸಿದ್ದಾರೆ ಮತ್ತು ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada