ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡದ ವೇಗಿ ಸ್ರಿಪಾಲಿ ವೀರಕ್ಕೋಡಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ. ಶ್ರೀಲಂಕಾ ಪರ 89 ಏಕದಿನ ಮತ್ತು 58 ಟಿ20 ಪಂದ್ಯಗಳನ್ನು ಆಡಿದ್ದಾರೆ. ಹಾಗೇ 2018ರಲ್ಲಿ ಬಾಂಗ್ಲಾದೇಶ ವಿರುದ್ಧ ಅವರು ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು. 2006ರಂದು ಜೈಪುರದಲ್ಲಿ ಪಾಕಿಸ್ತಾನ ವಿರುದ್ದ ಪಾದಾರ್ಪಣೆ ಮಾಡಿದ್ದ ಅವರು 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ತೆರೆ ಎಳೆದಿದ್ದಾರೆ. ನಾನು ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಅದಕ್ಕೆ ಇದು ಸರಿಯಾದ ಸಮಯ ಎಂದು ಭಾವಿಸಿದ್ದೇನೆ. ನಿವೃತ್ತಿ ಹೊಂದುವುದು ನನ್ನ ವೈಯಕ್ತಿಕ ನಿರ್ಧಾರವಾಗಿದೆ ಎಂದು ಸ್ರಿಪಾಲಿ ವೀರಕ್ಕೋಡಿ ತಿಳಿಸಿ ವಿದಾಯ ಹೇಳಿದ್ದಾರೆ.
14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ತೆರೆ ಎಳೆದ ಸ್ರಿಪಾಲಿ ವೀರಕ್ಕೋಡಿ
Please follow and like us: