ಕೋಲ್ಕತಾ: ಪಶ್ಚಿಮಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರ, ಬಂಗಾಳದ ಬಾಲಿಗಂಜ್ , ಛತ್ತೀಸ್ಗಢದ ಖೈರಗಢ, ಬಿಹಾರದ ಬೋಚಹಾ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರದ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶನಿವಾರ ಬೆಳಗ್ಗೆ ಆರಂಭವಾಗಿದೆ.
ಟಿಎಂಸಿಯ ಶತ್ರುಘ್ನ ಸಿನ್ಹಾ ಅಸನ್ಸೋಲ್ ಲೋಕಸಭಾ ಕ್ಷೇತ್ರದಲ್ಲಿ ಸುಮಾರು 6,500 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಬಿಜೆಪಿಯಿಂದ ಟಿಎಂಸಿಗೆ ಪಕ್ಷಾಂತರವಾಗಿರುವ ಬಾಬುಲ್ ಸುಪ್ರಿಯೋ ಬಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ 10ನೇ ಸುತ್ತಿನ ಮತ ಎಣಿಕೆಯ ಬಳಿಕ 7,872 ಮತಗಳಿಂದ ಮುನ್ನಡೆಯಲ್ಲಿದ್ದಾರೆ.
ಬಿಜೆಪಿ ಬಿಹಾರದ ಬೋಚಹಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆಯ ಬಳಿಕ ಮುನ್ನಡೆಯಲ್ಲಿದ್ದು, ಆರ್ ಜೆಡಿ ಎರಡನೇ ಸ್ಥಾನದಲ್ಲಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada