ಬೆಂಗಳೂರು,ಏ.22- ಶಾಸಕರು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂ.30ರೊಳಗೆ ಲೋಕಾಯುಕ್ತಕ್ಕೆ ಸಲ್ಲಿಸಬೇಕಿದೆ. ಹದಿನೈದನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2021-22ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ಲೋಕಾಯುಕ್ತರಿಗೆ ಸಲ್ಲಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.
ಏ.8ರಂದು ಲೋಕಾಯುಕ್ತ ನಿಬಂಧಕರು ವಿಧಾನಸಭೆ ಸಚಿವಾಲಯಕ್ಕೆ ಪತ್ರ ಬರೆದು, ಶಾಸಕರು ಆಸ್ತಿ ವಿವರ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಶಾಸಕರು ಆಯಾ ವರ್ಷದ ಜೂ.30ರೊಳಗಾಗಿ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ವಿವರವನ್ನು ಲೋಕಾಯುಕ್ತ ಕಾಯ್ದೆ ಪ್ರಕಾರ ಸಲ್ಲಿಸಬೇಕಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada